4 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ: ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು

ನಾಲ್ಕು ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ಭಾನುವಾರ ನೇಮಕ ಮಾಡಲಾಗಿದೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಕಿರಣ್ ರಿಜಿಜು
ಕಿರಣ್ ರಿಜಿಜು

ನವದೆಹಲಿ: ನಾಲ್ಕು ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ಭಾನುವಾರ ನೇಮಕ ಮಾಡಲಾಗಿದೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಅವರು ಟ್ವಿಟರ್‌ನಲ್ಲಿ ಹೊಸ ನೇಮಕಾತಿಗಳನ್ನು ಪ್ರಕಟಿಸಿದ್ದಾರೆ. ಭಾರತದ ಸಂವಿಧಾನದ ಅಡಿಯಲ್ಲಿ ಸಂಬಂಧಿತ ನಿಬಂಧನೆಗಳ ಪ್ರಕಾರ ಕೆಳಗಿನ ನ್ಯಾಯಾಧೀಶರನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಿಸಲಾಗಿದೆ. ಅವರೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ! ಎಂದು ರಿಜಿಜು ಟ್ವೀಟ್ ಮಾಡಿದ್ದಾರೆ.

ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಸೋನಿಯಾ ಗಿರಿಧರ್ ಗೋಕಣಿ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅರವಿಂದ್ ಕುಮಾರ್ ಅವರು ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಹೊಂದಿದ ನಂತರ ಸೋನಿಯಾ ಗಿರಿಧರ್ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿತ್ತು.

ರಾಜಸ್ಥಾನ ಹೈಕೋರ್ಟ್‌ನ ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನು ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ. ಒರಿಸ್ಸಾ ಹೈಕೋರ್ಟ್‌ನ ನ್ಯಾಯಮೂರ್ತಿ ಜಸ್ವಂತ್ ಸಿಂಗ್ ಅವರನ್ನು ತ್ರಿಪುರಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಗಿದೆ.

ಗುವಾಹಟಿ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಎನ್ ಕೋಟೇಶ್ವರ್ ಸಿಂಗ್ ಅವರನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com