ಮಹಾರಾಷ್ಟ್ರ: ಕಾರಿನ ಬಾನೆಟ್ ಮೇಲೆ ಪೊಲೀಸ್ ಪೇದೆ ಎಳೆದೊಯ್ದ ಚಾಲಕ; ಕೊಲೆ ಯತ್ನ ಕೇಸ್ ದಾಖಲು

ಪಾಲ್ಘರ್: ದೇಶದಲ್ಲಿ ಇತ್ತೀಚಿಗೆ ಹಿಟ್ ಅಂಡ್ ಡ್ರ್ಯಾಗ್ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಸಂಚಾರಿ ಪೊಲೀಸ್ ಪೇದೆಯನ್ನೇ ಕಾರಿನ ಬಾನೆಟ್ ಮೇಲೆ ಸುಮಾರು 1.5 ಕಿಲೋಮೀಟರ್ ಎಳೆದೊಯ್ದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈ ಪಟ್ಟಣದಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಸಿಗ್ನಲ್ ಜಂಪ್ ಮಾಡಿದ ಕಾರನ್ನು ನಿಲ್ಲಿಸಲು ಬಂದ ಟ್ರಾಫಿಕ್ ಪೊಲೀಸ್ ಪೇದೆಯನ್ನು ಸುಮಾರು 1.5 ಕಿಲೋಮೀಟರ್ ವರೆಗೆ ಬಾನೆಟ್ ಮೇಲೆ ಎಳೆದೊಯ್ದ ಚಾಲಕನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ.
ಘಟನೆಯ ನಂತರ ಕಾರು ಚಾಲಕ, ಚಾಲನಾ ಪರವಾನಗಿ ಹೊಂದಿಲ್ಲದ 19 ವರ್ಷದ ಯುವಕನನ್ನು ಭಾನುವಾರ ಸಂಜೆ ಬಂಧಿಸಲಾಗಿದೆ ಮತ್ತು ಆತನ ವಿರುದ್ಧ ಕೇಸ್ ದಾಖಲಿಸಿ ಇತರ ಅಪರಾಧಗಳ ಜೊತೆಗೆ ಕೊಲೆ ಯತ್ನದ ಆರೋಪವನ್ನು ಹೊರಿಸಲಾಗಿದೆ ಎಂದು ಮಾಣಿಕಪುರ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸಂಪತ್ರಾವ್ ಪಾಟೀಲ್ ತಿಳಿಸಿದ್ದಾರೆ.
ಕಾನ್ಸ್‌ಟೇಬಲ್, ಮುಂಬೈನ ವಸೈ ಪಟ್ಟಣದ ಜನನಿಬಿಡ ಜಂಕ್ಷನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಉತ್ತರ ಪ್ರದೇಶ ನೋಂದಣಿ ಹೊಂದಿರುವ ಕಾರನ್ನು ಟ್ರಾಫಿಕ್ ಸಿಗ್ನಲ್ ಜಂಪ್ ಮಾಡುವುದನ್ನು ಗಮನಿಸಿದ್ದು, ಕಾರು ನಿಲ್ಲಿಸುವಂತೆ ಚಾಲಕನಿಗೆ ಕೇಳಿಕೊಂಡಿದ್ದಾರೆ. ಆದರೆ ಕಾರು ನಿಲ್ಲಿಸಿದ ಚಾಲಕ ಪೊಲೀಸ್ ಪೇದೆಯನ್ನು ಎಳೆದೊಯ್ದಿದ್ದಾನೆ ಎಂದು ಪಾಟೀಲ್ ಹೇಳಿದ್ದಾರೆ.
ನಂತರ ಟ್ರಾಫಿಕ್ ಜಾಮ್‌ನಿಂದಾಗಿ ಕಾರು ಸ್ಥಗಿತಗೊಂಡಿತು ಮತ್ತು ಪಕ್ಕದಲ್ಲಿದ್ದವರು ಚಾಲಕನನ್ನು ಕೆಳಗಿಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


