ವಾರಣಾಸಿಯಲ್ಲಿ ರಾಹುಲ್ ವಿಮಾನ ಇಳಿಯಲು ಅವಕಾಶ ನಿರಾಕರಣೆ: ಕಾಂಗ್ರೆಸ್ ಆರೋಪ

ಸೋಮವಾರ ತಡರಾತ್ರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಯಾಣಿಸುತ್ತಿದ್ದ ವಿಮಾನವನ್ನು ಲ್ಯಾಂಡ್ ಮಾಡಲು ವಾರಣಾಸಿಯ ವಿಮಾನ ನಿಲ್ದಾಣದ ಅಧಿಕಾರಿಗಳು ಅವಕಾಶ ನಿರಾಕರಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ವಾರಣಾಸಿ: ಸೋಮವಾರ ತಡರಾತ್ರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಯಾಣಿಸುತ್ತಿದ್ದ ವಿಮಾನವನ್ನು ಲ್ಯಾಂಡ್ ಮಾಡಲು ವಾರಣಾಸಿಯ ವಿಮಾನ ನಿಲ್ದಾಣದ ಅಧಿಕಾರಿಗಳು ಅವಕಾಶ ನಿರಾಕರಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕೇರಳದ ವಯನಾಡ್‌ನಿಂದ ವಾಪಸಾಗುವಾಗ ಇಲ್ಲಿನ ಬಾಬಟ್ ವಿಮಾನ ನಿಲ್ದಾಣದಲ್ಲಿ ಗಾಂಧಿಯವರ ವಿಮಾನ ಲ್ಯಾಂಡ್ ಆಗಬೇಕಿತ್ತು ಎಂದು ಕಾಂಗ್ರೆಸ್ ಹಿರಿಯ ನಾಯಕ ಅಜಯ್ ರೈ ಮಂಗಳವಾರ ಆರೋಪಿಸಿದ್ದಾರೆ. ಆದರೆ, ವಿಮಾನ ನಿಲ್ದಾಣದ ಅಧಿಕಾರಿಗಳು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

ನಾನು ಮತ್ತು ನಮ್ಮ ಪಕ್ಷದ ನಾಯಕರು ರಾಹುಲ್ ಗಾಂಧಿಯವರನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣಕ್ಕೆ ತೆರಳಿದ್ದೆವು. ಆದರೆ, ನಮ್ಮ ನಾಯಕರ ವಿಮಾನಕ್ಕೆ ಕೊನೆಯ ಕ್ಷಣದಲ್ಲಿ ಲ್ಯಾಂಡ್ ಆಗಲು ಅವಕಾಶ ನಿರಾಕರಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಮಾನ ನಿಲ್ದಾಣದ ನಿರ್ದೇಶಕ ಅರ್ಯಾಮಾ ಸನ್ಯಾಲ್, ರಾಹುಲ್ ವಿಮಾನ ಬರುವ ಕುರಿತಂತೆ ಯಾವುದೇ  ಮಾಹಿತಿ ಇರಲಿಲ್ಲ ಎಂದಿದ್ದಾರೆ. ಅಲ್ಲದೆ, ವಿಮಾನದ ಲ್ಯಾಂಡ್‌ಗೆ ಅವಕಾಶ ನೀಡಿಲ್ಲ ಎಂಬ ಆರೋಪಗಳನ್ನು ಅವರು ತಳ್ಳಿ ಹಾಕಿದ್ದಾರೆ. ರಾಹುಲ್ ಅವರ ವಿಮಾನದ ಲ್ಯಾಂಡ್ ಅನ್ನು ರದ್ದುಪಡಿಸಲಾಗಿದೆ ಎಂದು ಏರ್ ಟ್ರಾಫಿಕ್ ಕಂಟ್ರೋಲರ್ ನಮಗೆ ತಿಳಿಸಿದರು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com