ಕೋವಿಡ್-19: ಕಳೆದ 24 ಗಂಟೆಗಳಲ್ಲಿ 102 ಹೊಸ ಕೊರೊನಾವೈರಸ್ ಪ್ರಕರಣ, ಮೂರು ಮಂದಿ ಸಾವು

ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 102 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,823ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 102 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,823ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಉತ್ತರ ಪ್ರದೇಶದಲ್ಲಿ ಎರಡು ಮತ್ತು ಕೇರಳದಲ್ಲಿ ಒಂದು ಸೇರಿದಂತೆ ಈವರೆಗೆ ದೇಶದಲ್ಲಿ 5,30,756 ಮಂದಿ ಕೋವಿಡ್‌ನಿಂದಾಗಿ ಸಾವಿಗೀಡಾಗಿದ್ದಾರೆ. 

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,84,376ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರ ಶೇ 0.08ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.09 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81ರಷ್ಟಿದೆ. ಸದ್ಯ ಈವರೆಗೆ ಸೋಂಕಿನಿಂದ 4,41,51,797 ಮಂದಿ ಚೇತರಿಸಿಕೊಂಡಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ.

ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೂ 220.63 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com