ಪ್ರಧಾನಿ ಮೋದಿ ವಿರುದ್ಧದ ಟೀಕೆಗೆ ಹಕ್ಕುಚ್ಯುತಿ ಮಂಡನೆ; ನೋಟಿಸ್‌ಗೆ ಉತ್ತರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಫೆಬ್ರುವರಿ 7 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾಡಿದ ಟೀಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹಕ್ಕುಚ್ಯುತಿ ಮಂಡನೆ ನೋಟಿಸ್‌ಗೆ ತಮ್ಮ ಉತ್ತರವನ್ನು ಲೋಕಸಭೆಯ ಸಚಿವಾಲಯಕ್ಕೆ ಕಳುಹಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಫೆಬ್ರುವರಿ 7 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾಡಿದ ಟೀಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹಕ್ಕುಚ್ಯುತಿ ಆರೋಪ ಕುರಿತಾದ ನೋಟಿಸ್‌ಗೆ ತಮ್ಮ ಉತ್ತರವನ್ನು ಲೋಕಸಭೆಯ ಸಚಿವಾಲಯಕ್ಕೆ ಕಳುಹಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಮೂಲಗಳ ಪ್ರಕಾರ, ಗಾಂಧಿ ಅವರು ಬುಧವಾರ ನೋಟಿಸ್‌ಗೆ ಉತ್ತರಿಸಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಅದಾನಿ ಗ್ರೂಪ್‌ನ ಕುರಿತಾದ ಹಿಂಡೆನ್‌ಬರ್ಗ್ ಸಂಶೋಧನಾ ವರದಿಗೆ ಸಂಬಂಧಿಸಿದಂತೆ ತಮ್ಮ ಭಾಷಣದ ಮೇಲಿನ ಹಕ್ಕುಚ್ಯುತಿ ಆಕೋಪಕ್ಕೆ ಸಂಬಂಧಿಸಿದ ಪ್ರಸ್ತಾಪಕ್ಕೆ ಉತ್ತರಿಸಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ, ರಾಹುಲ್ ಗಾಂಧಿಯವರು ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳಲು ವಿವಿಧ ಕಾನೂನುಗಳನ್ನು ಉಲ್ಲೇಖಿಸಿದ್ದಾರೆ.

ಏನೆಂದು ಉತ್ತರಿಸಿದ್ದಾರೆ ಎಂಬುದನ್ನು ಗೌಪ್ಯವಾಗಿಡಲಾಗಿದೆ. ಆದಾಗ್ಯೂ, ಕೆಲವು ಕಾಂಗ್ರೆಸ್ ನಾಯಕರು ತಮ್ಮ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳಿಗೆ ಸತ್ಯ ಮತ್ತು ಪೂರ್ವನಿದರ್ಶನಗಳ ಆಧಾರದ ಮೇಲೆ ಪ್ರತಿಕ್ರಿಯಿಸಿದ್ದಾರೆ ಎಂದು ಹೇಳಿದರು.

ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಆರೋಪ ಮಾಡುವ ಮೂಲಕ ರಾಹುಲ್ ಗಾಂಧಿ ಸದನವನ್ನು ದಾರಿ ತಪ್ಪಿಸಿದ್ದಾರೆ ಎಂದು ಜೋಶಿ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com