ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್‌ನಲ್ಲಿ ಪೋಸ್ಟ್; ವ್ಯಕ್ತಿಯನ್ನು ರಕ್ಷಿಸಿದ ಮುಂಬೈ ಪೊಲೀಸರು

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು 24 ವರ್ಷದ ಯುವಕನನ್ನು ಪತ್ತೆಹಚ್ಚಿದ್ದಾರೆ ಮತ್ತು ಆತನನ್ನು ಕೌನ್ಸೆಲಿಂಗ್‌ಗಾಗಿ ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಮುಂಬೈ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು 24 ವರ್ಷದ ಯುವಕನನ್ನು ಪತ್ತೆಹಚ್ಚಿದ್ದಾರೆ ಮತ್ತು ಆತನನ್ನು ಕೌನ್ಸೆಲಿಂಗ್‌ಗಾಗಿ ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಸಾಲದ ಸುಳಿಗೆ ಸಿಲುಕಿರುವ ವ್ಯಕ್ತಿ, ನಗರದ ಚೆಂಬೂರು ಸಮೀಪದ ಚುನಾಭಟ್ಟಿ ನಿವಾಸಿಯಾಗಿದ್ದು, ರಾಯಗಡ ಜಿಲ್ಲೆಯ ಕರ್ಜತ್‌ನಲ್ಲಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವ್ಯಕ್ತಿ ರೈಲಿನಲ್ಲಿ 'ಚಿಕ್ಕಿ' (ಕಡಲೆಕಾಯಿ ಬೀಜ ಮತ್ತು ಬೆಲ್ಲದಿಂದ ತಯಾರಿಸಿದ ತಿನಿಸು) ಎಂಬ ಸಿಹಿತಿಂಡಿಯನ್ನು ಮಾರಾಟ ಮಾಡುತ್ತಿದ್ದನು. ಆದರೆ, ನಷ್ಟದಿಂದಾಗಿ ಸಾಲದ ಸುಳಿಯಲ್ಲಿ ಮುಳುಗಿದ್ದನು ಎಂದು ಅಧಿಕಾರಿ ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಟ್ವಿಟರ್‌ನಲ್ಲಿ ವ್ಯಕ್ತಿಯೊಬ್ಬನ ಸುದೀರ್ಘ ಸಂದೇಶವನ್ನು ನಗರ ಪೊಲೀಸ್‌ನ ಅಪರಾಧ ವಿಭಾಗವು ನೋಡಿದೆ. ತಾನು ತನ್ನ ವ್ಯಾಪಾರಗಳಲ್ಲಿ ಹಲವಾರು ಹಿನ್ನಡೆಗಳನ್ನು ಅನುಭವಿಸಿದ್ದೇನೆ ಮತ್ತು ತನ್ನ ಜೀವನವನ್ನು ಕೊನೆಗೊಳಿಸಲು ಯೋಜಿಸುತ್ತಿದ್ದೇನೆ ಎಂದು ವ್ಯಕ್ತಿ ಬರೆದಿದ್ದನ್ನು ಗಮನಿಸಿದ್ದಾರೆ.

ಈ ವೇಳೆ ಕ್ರೈಂ ಬ್ರಾಂಚ್ ಪೊಲೀಸರು ಮುಂಬೈ ಪೊಲೀಸರ ಸೈಬರ್ ತಂಡಕ್ಕೆ ಎಚ್ಚರಿಕೆ ನೀಡಿದ್ದು, ಆತನ ಸಂಪರ್ಕ ವಿವರಗಳನ್ನು ಸಂಗ್ರಹಿಸಿದೆ ಮತ್ತು ಆತನೊಂದಿಗೆ ಸಂಪರ್ಕ ಸಾಧಿಸಿದೆ.

ಇಂದು ಮುಂಜಾನೆ 5 ಗಂಟೆಯ ಸುಮಾರಿಗೆ, ನಾವು ಆತನನ್ನು ಕರ್ಜತ್‌ನಿಂದ ಕರೆತಂದಿದ್ದೇವೆ ಮತ್ತು ಕೌನ್ಸೆಲಿಂಗ್‌ಗಾಗಿ ಬಿಕೆಸಿಯಲ್ಲಿರುವ ನಮ್ಮ ಸೈಬರ್ ವಿಭಾಗಕ್ಕೆ ಕರೆತಂದಿದ್ದೇವೆ. ಅವರು ಸುಮಾರು 3 ಲಕ್ಷ ರೂಪಾಯಿ ಸಾಲ ಹೊಂದಿದ್ದಾರೆ ಎಂದು ನಮಗೆ ತಿಳಿದು ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com