ಜಾರ್ಖಂಡ್‌ನ ಚೈಬಾಸಾದಲ್ಲಿ ಮಾವೋವಾದಿಗಳು ನಡೆಸಿದ ಐಇಡಿ ಸ್ಫೋಟದಲ್ಲಿ ಯುವಕ ಸಾವು

ಪಶ್ಚಿಮ ಸಿಂಗ್‌ಭೂಮ್‌ನ ಮೆರಲ್‌ಗಡ ಗ್ರಾಮದ ಬಳಿ ಮಾವೋವಾದಿಗಳು ನಡೆಸಿದ ಐಇಡಿ ಸ್ಫೋಟದಲ್ಲಿ 23 ವರ್ಷದ ಯುವಕನೋರ್ವ ಸಾವನ್ನಪ್ಪಿದ್ದಾನೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಂಚಿ: ಪಶ್ಚಿಮ ಸಿಂಗ್‌ಭೂಮ್‌ನ ಮೆರಲ್‌ಗಡ ಗ್ರಾಮದ ಬಳಿ ಮಾವೋವಾದಿಗಳು ನಡೆಸಿದ ಐಇಡಿ ಸ್ಫೋಟದಲ್ಲಿ 23 ವರ್ಷದ ಯುವಕನೋರ್ವ ಸಾವನ್ನಪ್ಪಿದ್ದಾನೆ.

ಗೋಯಿಲ್ಕೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಮೇರಲಗಡ ಗ್ರಾಮದ ಅರಣ್ಯದಲ್ಲಿ ಕಟ್ಟಿಗೆಗಳನ್ನು ಸಂಗ್ರಹಿಸಲು ಹೋದಾಗ ಈ ಘಟನೆ ನಡೆದಿದೆ. ಇದಕ್ಕೂ ಮೊದಲು, 2022ರ ಅಕ್ಟೋಬರ್-ನವೆಂಬರ್‌ನಲ್ಲಿ ಮಾವೋವಾದಿಗಳು ಇಟ್ಟಿದ್ದ IED ಸ್ಫೋಟಗಳಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದರು.

ಪೊಲೀಸರ ಪ್ರಕಾರ, ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ಗ್ರಾಮಸ್ಥರ ಸಹಾಯದಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. 

ಐಇಡಿ ಸ್ಫೋಟದಲ್ಲಿ 23 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಚೈಬಾಸಾ ಎಸ್‌ಪಿ ಅಶುತೋಷ್ ಶೇಖರ್ ಹೇಳಿದ್ದು ಇದೊಂದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ. ಜಿಲ್ಲಾ ಪೊಲೀಸರು ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿ ಗ್ರಾಮೀಣ ಜನರ ಭದ್ರತೆಯನ್ನು ಖಾತ್ರಿಪಡಿಸಲಿದ್ದಾರೆ.

ಮಾವೋವಾದಿಗಳು ಸೋಮವಾರ ರಾತ್ರಿ ರೆಂಗರಬೇಡ ಗ್ರಾಮದ ಬಳಿ ರಸ್ತೆಗೆ ಅಡ್ಡಲಾಗಿ ಮರವನ್ನು ಹಾಕುವ ಮೂಲಕ ದಿಗ್ಬಂಧನವನ್ನು ಹಾಕಿದ್ದರು. ಅಲ್ಲದೆ ಕಾರ್ಯಾಚರಣೆಯ ವಿರುದ್ಧ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com