ವಿಶ್ವಾಸ ಮರಳಿ ಪಡೆಯಲು ಒಳಗೊಳ್ಳುವಿಕೆ ಕಾರ್ಯಸೂಚಿ ಸಿದ್ಧಪಡಿಸಿ: ವಿಶ್ವ ನಾಯಕರಿಗೆ ಪ್ರಧಾನಿ ಮೋದಿ ಕರೆ

ಪ್ರಪಂಚದ ಮೇಲೆ ಪರಿಣಾಮ ಬೀರುವ ವಿವಿಧ ಸಮಸ್ಯೆಗಳನ್ನು ಎದುರಿಸಲು ಎಲ್ಲರನ್ನೂ ಒಳಗೊಳ್ಳುವ ಕಾರ್ಯಸೂಚಿ ಸಿದ್ಧಪಡಿಸುವ ಅಗತ್ಯ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ
Updated on

ಬೆಂಗಳೂರು: ಪ್ರಪಂಚದ ಮೇಲೆ ಪರಿಣಾಮ ಬೀರುವ ವಿವಿಧ ಸಮಸ್ಯೆಗಳನ್ನು ಎದುರಿಸಲು ಎಲ್ಲರನ್ನೂ ಒಳಗೊಳ್ಳುವ ಕಾರ್ಯಸೂಚಿ ಸಿದ್ಧಪಡಿಸುವ ಅಗತ್ಯ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜಿ20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಯನ್ನು ಉದ್ದೇಶಿಸಿ ವಿಡಿಯೋ ಭಾಷಣ ಮಾಡಿದ ಪ್ರಧಾನಿ ಮೋದಿ, "ಜಾಗತಿಕ ಆರ್ಥಿಕ ನಾಯಕತ್ವವು ಎಲ್ಲರನ್ನೂ ಒಳಗೊಳ್ಳುವ ಕಾರ್ಯಸೂಚಿಯನ್ನು ಸಿದ್ಧಪಡಿಸುವ ಮೂಲಕ ವಿಶ್ವದ ವಿಶ್ವಾಸವನ್ನು ಮರಳಿ ಗಳಿಸಬಬೇಕು" ಎಂದು ಕರೆ ನೀಡಿದರು.

ಭಾರತದ ಜಿ 20 ಅಧ್ಯಕ್ಷತೆಯು - ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ -- ಎಲ್ಲರನ್ನೂ ಒಳಗೊಳ್ಳುವ ದೃಷ್ಟಿಕೋನವನ್ನು ಒತ್ತಿಹೇಳಿದ ಪ್ರಧಾನಿ, ಜಾಗತಿಕ ಆರ್ಥಿಕತೆಯಲ್ಲಿ ಸ್ಥಿರತೆ, ವಿಶ್ವಾಸ ಮತ್ತು ಬೆಳವಣಿಗೆಯನ್ನು ಹೊಂದಲು ಗುಂಪುಗಳ ಸಹಕಾರ ಅತ್ಯಗತ್ಯ ಎಂದು ಹೇಳಿದರು.

ಜಗತ್ತು ಗಂಭೀರ ಆರ್ಥಿಕ ತೊಂದರೆಗಳನ್ನು ಎದುರುಸುತ್ತಿರುವ ಸಮಯದಲ್ಲಿ ಜಾಗತಿಕ ಹಣಕಾಸು ಮತ್ತು ಆರ್ಥಿಕತೆಯ ನಾಯಕತ್ವವನ್ನು ನೀವು ಪ್ರತಿನಿಧಿಸುತ್ತೀರಿ. ಕೋವಿಡ್‌–19 ಸಾಂಕ್ರಾಮಿಕವು ಜಾಗತಿಕ ಆರ್ಥಿಕತೆಗೆ ಭಾರೀ ಹೊಡೆತವನ್ನು ನೀಡಿದೆ. ಅನೇಕ ದೇಶಗಳು, ವಿಶೇಷವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳು ಇನ್ನೂ ಅದರ ಪರಿಣಾಮಗಳನ್ನು ನಿಭಾಯಿಸುತ್ತಿವೆ. ಇದರೊಂದಿಗೆ ಪ್ರಪಂಚದ ವಿವಿಧ ಭಾಗಗಳಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳಿಗೂ ನಾವು ಸಾಕ್ಷಿಯಾಗಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.

ವಿಶ್ವದ ಜನಸಂಖ್ಯೆಯು 8 ಶತಕೋಟಿ ದಾಟಿದ್ದರೂ, ಸುಸ್ಥಿರ ಅಭಿವೃದ್ಧಿ ಗುರಿಗಳ ಪ್ರಗತಿಯು ನಿಧಾನವಾಗುತ್ತಿದೆ. ಹವಾಮಾನ ಬದಲಾವಣೆ ಮತ್ತು ಹೆಚ್ಚಿನ ಸಾಲದ ಮಟ್ಟಗಳಂತಹ ಜಾಗತಿಕ ಸವಾಲುಗಳನ್ನು ಎದುರಿಸಲು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳನ್ನು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದರು.

ಭಾರತೀಯ ಗ್ರಾಹಕರು ಮತ್ತು ಉತ್ಪಾದಕರು ಭವಿಷ್ಯದ ಬಗ್ಗೆ ಆಶಾವಾದಿ ಮತ್ತು ವಿಶ್ವಾಸ ಹೊಂದಿದ್ದಾರೆ, ನೀವು ಜಾಗತಿಕ ಆರ್ಥಿಕತೆಗೆ ಅದೇ ಸಕಾರಾತ್ಮಕ ಮನೋಭಾವವನ್ನು ರವಾನಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com