ಇಂದೋರ್: ಕಾಲೇಜು ಪ್ರಾಂಶುಪಾಲರಿಗೆ ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ; ಚಿಕಿತ್ಸೆಗೆ ಸ್ಪಂದಿಸದೆ ಸಾವು

ಫೆಬ್ರುವರಿ 20 ರಂದು ಮಾಜಿ ವಿದ್ಯಾರ್ಥಿಯಿಂದ ಬೆಂಕಿ ಹಚ್ಚಿಸಿಕೊಂಡು ಶೇ 80 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಇಂದೋರ್‌ನ ಖಾಸಗಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರು ಶನಿವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭೋಪಾಲ್: ಫೆಬ್ರುವರಿ 20 ರಂದು ಮಾಜಿ ವಿದ್ಯಾರ್ಥಿಯಿಂದ ಬೆಂಕಿ ಹಚ್ಚಿಸಿಕೊಂಡು ಶೇ 80 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಇಂದೋರ್‌ನ ಖಾಸಗಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರು ಶನಿವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವರದಿಗಳ ಪ್ರಕಾರ, ವಿಮುಕ್ತ ಶರ್ಮಾ ಅವರ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದ ವೈದ್ಯರ ತಂಡವು ಮುಂಜಾನೆ 4 ಗಂಟೆಗೆ ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

54 ವರ್ಷದ ಪ್ರಾಂಶುಪಾಲರು ಮನೆಗೆ ತೆರಳುವ ವೇಳೆ ಬಿಎಂ ಫಾರ್ಮಸಿ ಕಾಲೇಜು ಆವರಣದಲ್ಲಿ ಈ ಘಟನೆ ನಡೆದಿದೆ.

ಈ ನಡುವೆ ಆರೋಪಿ ಅಶುತೋಷ್ ಶ್ರೀವಾಸ್ತವ (24) ಆಕೆಯ ಬಳಿ ಬಂದು ತನ್ನ ಅಂಕಪಟ್ಟಿ ನೀಡಲು ವಿಳಂಬ ಮಾಡಿದ್ದಕ್ಕೆ ಕೆಲಕಾಲ ವಾಗ್ವಾದ ನಡೆಸಿ, ಆಕೆಯ ಮೇಲೆ ಪೆಟ್ರೋಲ್ ಸುರಿದು ಸಿಗರೇಟ್ ಲೈಟರ್‌ನಿಂದ ಸುಟ್ಟು ಹಾಕಿದ್ದಾನೆ.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಶ್ರೀವಾಸ್ತವ್‌ನನ್ನು ಬಂಧಿಸಲಾಗಿತ್ತು.

ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಪ್ರಾಂಶುಪಾಲರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ವಿದ್ಯಾರ್ಥಿಯು 7 ನೇ ಸೆಮಿಸ್ಟರ್‌ನಲ್ಲಿ ಅನುತ್ತೀರ್ಣನಾಗಿರುವುದು ತಿಳಿದುಬಂದಿದೆ. ನಾವು ಈಗಾಗಲೇ ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಇಂದೋರ್ ಗ್ರಾಮಾಂತರ) ಭಗವತ್ ಸಿಂಗ್ ವಿರ್ಡೆ ಹೇಳಿದ್ದಾರೆ.

ಇಂದೋರ್ ಜಿಲ್ಲಾಧಿಕಾರಿ ಇಳಯರಾಜ ಟಿ ಹೊರಡಿಸಿದ ಆದೇಶದಂತೆ ಶ್ರೀವಾಸ್ತವ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿ ಪ್ರಕರಣ ದಾಖಲಿಸಲಾಗಿದೆ.

ತನಿಖೆ ಸಮಯದಲ್ಲಿ, ಶ್ರೀವಾಸ್ತವ ವಿರುದ್ಧ ಫಾರ್ಮಸಿ ಕಾಲೇಜು ಅಧಿಕಾರಿಗಳು, ಮಹಿಳಾ ಪ್ರಾಂಶುಪಾಲರು ಮತ್ತು ಇತರ ಸಿಬ್ಬಂದಿಯಿಂದ ಎರಡ್ಮೂರು ದೂರುಗಳು ಕೇಳಿಬಂದಿವೆ. ಆರೋಪಿ ಆತ್ಮಹತ್ಯೆ ಬೆದರಿಕೆ ಹಾಕುತ್ತಿದ್ದನು ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com