ಮಧ್ಯ ಪ್ರದೇಶ: ಮದುವೆ ಊಟ ಸೇವಿಸಿದ 43 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಆಹಾರ ಸೇವಿಸಿದ 43 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಖಾರ್ಗೋನ್: ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಆಹಾರ ಸೇವಿಸಿದ 43 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ ಖಾರ್ಗೋನ್‌ನ ನ್ಯೂ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ವಿವಾಹ ಕಾರ್ಯಕ್ರಮ ನಡೆಯಿತು.

ಅಲ್ಲಿ ಹಣ್ಣಿನ ಕಸ್ಟರ್ಡ್ಸ್ ಸೇವಿಸಿದ ಬಳಿಕ 43 ಮಂದಿಗೆ ವಿಷಾಹಾರ ಸೇವನೆಯಿಂದಾಗಿ ವಾಂತಿಭೇದಿ ಉಂಟಾಗಿದೆ. ರೋಗಿಗಳಿಗೆ ಔಷಧಿ ನೀಡಲಾಗಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಆಸ್ಪತ್ರೆಯ ಡಾ.ಬಿ.ಎಂ. ಚೌಹಾಣ್ ತಿಳಿಸಿದ್ದಾರೆ.

ಪ್ರಾಥಮಿಕ ಚಿಕಿತ್ಸೆ ಬಳಿಕ ಬಹುತೇಕರನ್ನು ಬಿಡುಗಡೆ ಮಾಡಲಾಗಿದೆ ಎಂದರು.

ಕಸ್ಟರ್ಡ್ಸ್ ಸೇವಿಸಿದ ಬಳಿಕ ವಾಂತಿಭೇದಿ ಕಾಣಿಸಿಕೊಂಡು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಔಷಧಗಳನ್ನು ನೀಡಿದ ಬಳಿಕ ಚೇತರಿಕೆ ಕಂಡರು ಎಂದು ರೋಗಿಯೊಬ್ಬರ ಸಂಬಂಧಿ ಮೋಹನ್ ಲಾಲ್ ಪಾಟಿದಾರ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com