ವರದಕ್ಷಿಣೆಗಾಗಿ ಕಿರುಕುಳ; ಬಲವಂತವಾಗಿ ಆ್ಯಸಿಡ್ ಕುಡಿಸಿದ ಅತ್ತೆ, ಉತ್ತರ ಪ್ರದೇಶದ ಮಹಿಳೆ ಸಾವು

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ವರದಕ್ಷಿಣೆ ಬೇಡಿಕೆಯನ್ನು ಈಡೇರಿಸದಿದ್ದಕ್ಕಾಗಿ ಅತ್ತೆಯೊಬ್ಬರು ಆ್ಯಸಿಡ್ ಕುಡಿಸಿದ್ದರಿಂದ 25 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ವರದಕ್ಷಿಣೆ ಬೇಡಿಕೆಯನ್ನು ಈಡೇರಿಸದಿದ್ದಕ್ಕಾಗಿ ಅತ್ತೆಯೊಬ್ಬರು ಆ್ಯಸಿಡ್ ಕುಡಿಸಿದ್ದರಿಂದ 25 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಬಿತ್ರಿ ಚೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಉಡಾಲ ಜಾಗೀರ್ ಗ್ರಾಮದ ನಿವಾಸಿ ಅಂಜುಮ್ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.

ಸಾವಿಗೂ ಮುನ್ನ ಮ್ಯಾಜಿಸ್ಟ್ರೇಟ್ ಮುಂದೆ ತನ್ನ ಹೇಳಿಕೆ ದಾಖಲಿಸಿರುವ ಸಂತ್ರಸ್ತೆ, ಆಕೆಯ ಪೋಷಕರು 2.50 ಲಕ್ಷ ರೂಪಾಯಿ ನಗದು ಮತ್ತು ಕಾರಿಗೆ ಬೇಡಿಕೆಯನ್ನು ಪೂರೈಸಲು ವಿಫಲವಾದ ಕಾರಣ ತನ್ನ ಅತ್ತೆ ಆ್ಯಸಿಡ್ ಕುಡಿಯಲು ಒತ್ತಾಯಿಸಿದರು ಎಂದು ಆರೋಪಿಸಿದರು.

ಆಕೆಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ, ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ನವಾಬ್‌ಗಂಜ್ ಪೊಲೀಸ್ ಠಾಣೆಯಲ್ಲಿ ಆಕೆಯ ಪತಿ ಮತ್ತು ಅತ್ತೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಎಫ್‌ಐಆರ್ ಅನ್ನು ಬಿತ್ರಿ ಚೈನ್‌ಪುರಕ್ಕೆ ವರ್ಗಾಯಿಸಲಾಗುತ್ತದೆ.

ಬರೇಲಿ (ಗ್ರಾಮೀಣ) ಪೊಲೀಸ್ ಅಧೀಕ್ಷಕ ರಾಜ್‌ಕುಮಾರ್ ಅಗರ್ವಾಲ್ ಮಾತನಾಡಿ, ಇದು ಗಂಭೀರ ವಿಷಯವಾಗಿದೆ ಮತ್ತು ನವಾಬ್‌ಗಂಜ್ ಮತ್ತು ಬಿತ್ರಿ ಚೈನ್‌ಪುರ್ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಆರು ವರ್ಷಗಳ ಹಿಂದೆ ಉಡಾಲ ಜಾಗೀರ್ ಗ್ರಾಮದ ಇಲಿಯಾಸ್ ಎಂಬಾತನನ್ನು ಅಂಜುಮ್ ಮದುವೆಯಾಗಿದ್ದಳು.

15 ದಿನಗಳ ಹಿಂದೆ ಅಂಜುಮ್ ತನ್ನ ಪೋಷಕರ ಮನೆಗೆ ಭೇಟಿ ನೀಡಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಮತ್ತು 2.50 ಲಕ್ಷ ರೂಪಾಯಿ ನಗದು ಮತ್ತು ಕಾರು ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿದ್ದಳು ಎಂದು ಆಕೆಯ ಸಹೋದರಿ ಹೇಳಿದ್ದಾರೆ.

ಫೆಬ್ರುವರಿ 21 ರಂದು ಆಕೆಯ ಕುಟುಂಬಸ್ಥರಿಗೆ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಕುಟುಂಬಸ್ಥರು ಭೇಟಿ ನೀಡಿದಾಗ ಆಕೆಯ ಸ್ಥಿತಿ ಚಿಂತಾಜನಕವಾಗಿದ್ದು, ಆಕೆಯನ್ನು ಬೇರೆ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com