ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಏಕಾಏಕಿ ಕುಸಿದು ಬಿದ್ದು ಯುವಕ ಸಾವು, ವಿಡಿಯೋ ವೈರಲ್!
ಹೈದರಾಬಾದ್: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ 19 ವರ್ಷದ ಯುವಕ ತೆಲಂಗಾಣದಲ್ಲಿ ಶನಿವಾರ ರಾತ್ರಿ ತನ್ನ ಸಂಬಂಧಿಕರ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಈ ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ. ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಯುವಕ ಡಿಜೆಯಲ್ಲಿ ಹಾಡಿ ಕುಣಿಯುತ್ತಿದ್ದ. ಈ ಘಟನೆಯಿಂದ ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ಶೋಕ ಮಡುಗಟ್ಟಿದೆ.
ವರದಿಗಳ ಪ್ರಕಾರ, ಮಹಾರಾಷ್ಟ್ರ ಮೂಲದ ಮುತ್ಯಂ ಹೈದರಾಬಾದ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ನಿರ್ಮಲ್ ಜಿಲ್ಲೆಯ ಪಾರ್ಡಿ ಗ್ರಾಮದಲ್ಲಿ ಸಂಬಂಧಿಕರ ವಿವಾಹ ಸಮಾರಂಭದಲ್ಲಿ ಅತಿಥಿಗಳ ಸಮ್ಮುಖದಲ್ಲಿ ಡಿಜೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದರು. ಅಷ್ಟರಲ್ಲಿ ಹಠಾತ್ತನೆ ಕುಸಿದು ಬಿದ್ದಿದ್ದು ಮತ್ತೆ ಮೇಲೇಳಲಿಲ್ಲ.
ಯುವಕನನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಪರೀಕ್ಷೆಯ ನಂತರ ಅವನು ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದರು. ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಯುವಕನಿಗೆ ಹೃದಯಾಘಾತವಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಗಮನಾರ್ಹವೆಂದರೆ, ತೆಲಂಗಾಣದಲ್ಲಿ 4 ದಿನಗಳಲ್ಲಿ ಇದು ಎರಡನೇ ಘಟನೆಯಾಗಿದೆ.

