ಜಮ್ಮು-ಕಾಶ್ಮೀರ: ಅವಂತಿಪೋರಾ ಎನ್ ಕೌಂಟರ್, ಓರ್ವ ಉಗ್ರನ ಹತ್ಯೆ

ಜಮ್ಮು-ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು  ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ
ಭದ್ರತಾ ಪಡೆಗಳು
ಭದ್ರತಾ ಪಡೆಗಳು
Updated on

ಅವಂತಿಪೋರಾ:  ಜಮ್ಮು-ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು  ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಉಗ್ರನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಎನ್ ಕೌಂಟರ್ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಪುಲ್ವಾಮಾ ಜಿಲ್ಲೆಯಲ್ಲಿ ಕಾಶ್ಮೀರ ಪಂಡಿತರೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದ ಮಾರನೇ ದಿನ ಅವಂತಿಪೋರಾದಲ್ಲಿ ಇಂದು ಮುಂಜಾನೆ ಕಾರ್ಯಾಚರಣೆ ಆರಂಭಿಸಲಾಗಿದೆ. ಪೊಲೀಸ್ ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿರುವುದಾಗಿ ಕಾಶ್ಮೀರ ವಲಯ ಅಧಿಕಾರಿ ಟ್ವೀಟರ್ ನಲ್ಲಿ ತಿಳಿಸಿದ್ದಾರೆ. 

ಭಾನುವಾರ ಪುಲ್ವಾಮಾ ಜಿಲ್ಲೆಯ ಸ್ಥಳೀಯ ಮಾರುಕಟ್ಟೆಯೊಂದಕ್ಕೆ ತೆರಳುತ್ತಿದ್ದ ಕಾಶ್ಮೀರಿ ಪಂಡಿತ ಸಂಜಯ್ಶರ್ಮಾ ಅವರ ಮೇಲೆ ಗುಂಡಿಕ್ಕಿ ಉಗ್ರರು ಹತ್ಯೆಗೈದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com