ಜಮ್ಮು- ಕಾಶ್ಮೀರ: ಶಂಕಿತ ಉಗ್ರರ ದಾಳಿ, ಮೂವರು ನಾಗರಿಕರು ಸಾವು
ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗ್ರಾಮವೊಂದಕ್ಕೆ ನುಗ್ಗಿದ ಬಂದೂಕುಧಾರಿಗಳು ನುಗ್ಗಿದ ನಂತರ ಶಂಕಿತ ಉಗ್ರರ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಡ್ಯಾಂಗ್ರಿ ಗ್ರಾಮದಲ್ಲಿ ಇಬ್ಬರು ಶಂಕಿತ ಉಗ್ರರು ಗ್ರಾಮಸ್ಥರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ಮನೆಗಳ ಮೇಲೆ ಗುಂಡಿನ ದಾಳಿ ನಡೆದಿದ್ದು, ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಹೇಳಿದ್ದಾರೆ.
ಸ್ಥಳೀಯ ವರದಿಗಳ ಪ್ರಕಾರ ಮೃತರ ಸಂಖ್ಯೆ ಮೂರಕ್ಕೆ ಏರಿದೆ ಮತ್ತು ಗಂಭೀರವಾಗಿ ಗಾಯಗೊಂಡಿದ್ದ ಎಂಟು ಜನರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ರಜೌರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕರೆದೊಯ್ಯುಲಾಗಿದ್ದು, ಅಲ್ಲಿ ಜನಸ್ತೋಮವೇ ನೆರೆದಿತ್ತು.
ಇದು ಕಳೆದ ಎರಡು ವಾರಗಳಲ್ಲಿ ರಜೌರಿ ಜಿಲ್ಲೆಯಲ್ಲಿ ನಡೆದಿರುವ ಎರಡನೇ ಘಟನೆಯಾಗಿದೆ. ಡಿಸೆಂಬರ್ 16 ರಂದು ಸೇನಾ ಶಿಬಿರ ಹೊರಗಡೆ ನಡೆದ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ