ಭೀಕರ ರಸ್ತೆ ಅಪಘಾತ: ಸ್ಕೂಟರ್ ಗೆ ಢಿಕ್ಕಿ ಹೊಡೆದು, ಮಹಿಳೆಯನ್ನು 4 ಕಿ.ಮೀ ಎಳೆದೊಯ್ದ ಕಾರು; ಮಹಿಳೆ ಸಾವು

ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಚಲಿಸುತ್ತಿದ್ದ ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಮಹಿಳೆಯನ್ನು 4 ಕಿ.ಮೀ ಎಳೆದೊಯ್ದು ಪರಿಣಾಮ ಆಕೆ ಮೃತಪಟ್ಟಿದ್ದಾರೆ. 
ದೆಹಲಿಯಲ್ಲಿ ಸಂಭವಿಸಿದ ರಸ್ತೆ ಅಪಘಾತ
ದೆಹಲಿಯಲ್ಲಿ ಸಂಭವಿಸಿದ ರಸ್ತೆ ಅಪಘಾತ
Updated on: 

ನವದೆಲಿ: ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಚಲಿಸುತ್ತಿದ್ದ ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಮಹಿಳೆಯನ್ನು 4 ಕಿ.ಮೀ ಎಳೆದೊಯ್ದು ಪರಿಣಾಮ ಆಕೆ ಮೃತಪಟ್ಟಿದ್ದಾರೆ. 

ಅಮನ್ ವಿಹಾರ್ ನಿವಾಸಿ ಅಂಜಲಿ ಮೃತ ಯುವತಿಯಾಗಿದ್ದು, ಹೊಸ ವರ್ಷಾಚರಣೆ ಆರಂಭವಾದ ಕೆಲವೇ ಘಂಟೆಗಳಲ್ಲಿ ಈ ಘಟನೆ ನಡೆದಿದೆ. ಕಾರು ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಚಕ್ರಕ್ಕೆ ಮಹಿಳೆ ಸಿಲುಕಿದ್ದಾರೆ, ಆದರೂ ಕಾರು 4 ಕಿ.ಮೀ ವರೆಗೂ ಚಲಿಸಿದೆ. ಸ್ಥಳೀಯರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಗೆ ಕಾರಣವಾದ ಬಲೆನೋ ಕಾರಿನಲ್ಲಿದ್ದ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದು, ಕಾರಿನ ಕೆಳಗೆ ಮಹಿಳೆ ಸಿಲುಕಿದ್ದಾರೆ ಎಂಬುದು ತಿಳಿದಿರಲಿಲ್ಲ ಎಂದು ಬಂಧಿತರು
ವಿಚಾರಣೆ ವೇಳೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com