ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದ ವೃದ್ಧಾಶ್ರಮದಲ್ಲಿ ಬೆಂಕಿ ಅವಘಡ; ಇಬ್ಬರು ಸಾವು

ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿನ ವೃದ್ಧಾಶ್ರಮದಲ್ಲಿ ಭಾನುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿನ ವೃದ್ಧಾಶ್ರಮದಲ್ಲಿ ಭಾನುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಜಾನೆ 5.14ರ ವೇಳೆಗೆ ಅಂಟಾರಾ ಕೇರ್ ಫಾರ್ ಸೀನಿಯರ್ಸ್ ವೃದ್ಧಾಶ್ರಮದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ.

ಐದು ಅಗ್ನಿಶಾಮಕ ವಾಹನಗಳು ಮತ್ತು ಕೆಲವು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿದ್ದು, ಬೆಳಿಗ್ಗೆ 6.50ರ ಹೊತ್ತಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ಸಹಾಯ ಮಾಡಿದ ಪೊಲೀಸರ ಪ್ರಕಾರ, ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ನಂದಿಸಿದ ಬಳಿಕ ಮೂರನೇ ಮಹಡಿಯಲ್ಲಿ ಸಂಪೂರ್ಣ ಸುಟ್ಟ ಎರಡು ಶವಗಳು ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪರಾಧ ಮತ್ತು ಎಫ್‌ಎಸ್‌ಎಲ್ ತಂಡಗಳನ್ನು ಸ್ಥಳಕ್ಕೆ ಕರೆಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಚಂದನ್ ಚೌಧರಿ ತಿಳಿಸಿದ್ದಾರೆ.

ಒಬ್ಬ ಹಿರಿಯ ನಾಗರಿಕನನ್ನು ಮ್ಯಾಕ್ಸ್ ಆಸ್ಪತ್ರೆ ಸಾಕೇತ್‌ಗೆ ಮತ್ತು ಇತರ 12 ಜನರನ್ನು ಅಂಟಾರಾ ಕೇರ್‌ನ ಓಖ್ಲಾದಲ್ಲಿರುವ ಮತ್ತೊಂದು ಶಾಖೆಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದರು. ಈ ಬಗ್ಗೆ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com