ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ

ಇದು ಅಮಾನವೀಯ, ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ; ದೆಹಲಿ ಯುವತಿ ಸಾವಿನ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಬೇಸರ

ದೆಹಲಿ ಭೀಕರ ಅಪಘಾತ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು, ಹೊಸ ವರ್ಷದಂದು ಸಂಭವಿಸಿದ ಈ ದುರಂತದಿಂದ ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಹೇಳಿದ್ದಾರೆ.

ನವದೆಹಲಿ: ದೆಹಲಿ ಭೀಕರ ಅಪಘಾತ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು, ಹೊಸ ವರ್ಷದಂದು ಸಂಭವಿಸಿದ ಈ ದುರಂತದಿಂದ ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಭಾನುವಾರ ಬೆಳಿಗ್ಗೆ ಕಂಝಾವ್ಲಾ-ಸುಲ್ತಾನ್‌ಪುರಿಯಲ್ಲಿ ನಡೆದ ಅಮಾನವೀಯ ಘಟನೆಯ ಬಗ್ಗೆ ನನ್ನ ತಲೆ ನಾಚಿಕೆಯಿಂದ ತಗ್ಗಿದೆ. ಈ ಘಟನೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ದೆಹಲಿಯ ಪೊಲೀಸ್ ಆಯುಕ್ತರು ಆರೋಪಿಗಳನ್ನು ಬಂಧಿಸಿದ್ದಾರೆ. ಎಲ್ಲಾ ಅಂಶಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಸಂತ್ರಸ್ತರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ರೀತಿಯ ಸಹಾಯ ಮಾಡಲಾಗುವುದು. ಇನ್ನಾದರೂ ಹೆಚ್ಚು ಜವಾಬ್ದಾರಿಯುತ ಮತ್ತು ಸಂವೇದನಾಶೀಲ ಸಮಾಜಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡೋಣ ಎಂದು ಅವರು ತಿಳಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮಾಡಿ, ಕಾಂಜಾವಾಲಾದಲ್ಲಿ ನಡೆದ ಘಟನೆ, ಬಹಳ ನಾಚಿಕೆಗೇಡಿನ ವಿಚಾರವಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂಬ ಭರವಸೆಯಿದೆ ಎಂದಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ 20 ವರ್ಷದ ಯುವತಿಯೊಬ್ಬಳ ಸ್ಕೂಟಿ ಕಾರಿಗೆ ಡಿಕ್ಕಿ ಹೊಡೆದಿತ್ತು. ಆಕೆಯ ಬಟ್ಟೆ ಕಾರಿಗೆ ಸಿಕ್ಕಿ ಆಕೆಯನ್ನು ಕಾರು 4 ಕಿ.ಮೀವರೆಗೂ ಎಳೆದುಕೊಂಡು ಹೋಗಿತ್ತು. ಈ ಘಟನೆಯಲ್ಲಿ ತೀವ್ರವಾಗಿ ಯುವತಿ ಮೃತಪಟ್ಟಿದ್ದಳು.

Related Stories

No stories found.

Advertisement

X
Kannada Prabha
www.kannadaprabha.com