ಮಹಾರಾಷ್ಟ್ರದ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಸಂಖ್ಯೆ 4ಕ್ಕೆ ಏರಿಕೆ

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಸೋಮವಾರ ಸಾವಿಗೀಡಾಗಿದ್ದು, ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಸೋಮವಾರ ಸಾವಿಗೀಡಾಗಿದ್ದು, ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನಿಂದ ಸುಮಾರು 400 ಕಿಮೀ ದೂರದಲ್ಲಿರುವ ಬಾರ್ಶಿ ತಾಲೂಕಿನ ಶಿರಾಳ ಗ್ರಾಮದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ.

ಘಟನೆ ನಂತರ ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ.

ಗಾಯಾಳುಗಳಲ್ಲಿ ಒಬ್ಬರು ಸೋಮವಾರ ಮುಂಜಾನೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಓರ್ವ ಕಾರ್ಮಿಕ ಸೋಲಾಪುರ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com