ತಮಿಳುನಾಡು: ಕಡಲೂರಿನಲ್ಲಿ ಮುಂಜಾನೆ ಸರಣಿ ಅಪಘಾತ; ಒಂದೇ ಕುಟುಂಬದ ಐವರು ಸಾವು

ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ಆರು ವಾಹನಗಳ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನ ಕುಡಲೂರಿನ ಬಳಿ ಸಂಭವಿಸಿದ ಸರಣಿ ಅಪಘಾತ
ತಮಿಳುನಾಡಿನ ಕುಡಲೂರಿನ ಬಳಿ ಸಂಭವಿಸಿದ ಸರಣಿ ಅಪಘಾತ
Updated on: 

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ಆರು ವಾಹನಗಳ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸ್ ತಂಡ, ಮೃತರ ಗುರುತು ಪತ್ತೆಯಾಗಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ವಾಹನದ ಆರ್‌ಸಿ ಪರಿಶೀಲನೆ ವೇಳೆ ಕಾರು ಚೆನ್ನೈನಲ್ಲಿ ನೋಂದಣಿ ಮಾಡಿರುವುದು ಬೆಳಕಿಗೆ ಬಂದಿದೆ.

ಎರಡು ಬಸ್‌ಗಳು, ಎರಡು ಟ್ರಕ್‌ಗಳು ಮತ್ತು ಎರಡು ಕಾರುಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಮೃತಪಟ್ಟಿರುವ ಐವರೂ ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಡಲೂರಿನ ವೇಪ್ಪೂರಿನ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಾಯದಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕುಡಲೂರು ಆಸ್ಪತ್ರೆಯಲ್ಲಿರಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com