ಜಮ್ಮು: ರಜೌರಿ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡುವವರಿಗೆ 10 ರೂಪಾಯಿ ನಗದು ಬಹುಮಾನ ನೀಡುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಘೋಷಿಸಿದ್ದಾರೆ.
ಧಂಗ್ರಿ ರಜೌರಿಯಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಹಂಚಿಕೊಳ್ಳುವವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲದೆ, ಉಗ್ರರ ಬಗ್ಗೆ ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುತ್ತದೆ. ರಜೌರಿ ಜಿಲ್ಲೆಯ ಧಂಗ್ರಿ ಗ್ರಾಮದಲ್ಲಿ ಭಾನುವಾರ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ನಾಲ್ವರು ನಾಗರಿಕರು ಸಾವಿಗೀಡಾಗಿದ್ದರು ಮತ್ತು ಆರು ಮಂದಿ ಗಾಯಗೊಂಡಿದ್ದಾರೆ.
ಸೋಮವಾರ, ದಾಳಿಯ ಸ್ಥಳದಲ್ಲಿ ಭಯೋತ್ಪಾದಕರು ಅಳವಡಿಸಿದ್ದ ಐಇಡಿ ಸ್ಫೋಟಗೊಂಡು ಇಬ್ಬರು ಅಪ್ರಾಪ್ತ ಮಕ್ಕಳು ಸಾವಿಗೀಡಾಗಿದ್ದಾರೆ ಮತ್ತು ಆರು ಜನರು ಗಾಯಗೊಂಡಿದ್ದಾರೆ.
ಕೇಂದ್ರಾಡಳಿತ ಪ್ರದೇಶದ ಸರ್ಕಾರವುಭಯೋತ್ಪಾದನಾ ದಾಳಿಯ ಸಂತ್ರಸ್ತರ ಸಂಬಂಧಿಕರಿಗೆ 10 ಲಕ್ಷ ರೂಪಾಯಿಗಳ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ಈಗಾಗಲೇ ಘೋಷಿಸಿದೆ.
Advertisement