ಸಚಿವರ ಹೇಳಿಕೆಗೆ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಸಾಮೂಹಿಕ ಹೊಣೆಗಾರಿಕೆಯ ತತ್ವವನ್ನು ಅನ್ವಯಿಸುವಾಗಲೂ ಸಚಿವರು ವೈಯಕ್ತಿಕವಾಗಿ ನೀಡಿದ ಹೇಳಿಕೆಗೆ ಸರ್ಕಾರ ಕಾರಣವಾಗುವುದಿಲ್ಲ, ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಸಾಮೂಹಿಕ ಹೊಣೆಗಾರಿಕೆಯ ತತ್ವವನ್ನು ಅನ್ವಯಿಸುವಾಗಲೂ ಸಚಿವರು ವೈಯಕ್ತಿಕವಾಗಿ ನೀಡಿದ ಹೇಳಿಕೆಗೆ ಸರ್ಕಾರ ಕಾರಣವಾಗುವುದಿಲ್ಲ, ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

ಜಸ್ಟಿಸ್ ಎಸ್ ಎ ನಜೀರ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಇಂದು ವಿಚಾರಣೆ ನಡೆಸಿ, ಸಂವಿಧಾನದ 19(2) ನೇ ವಿಧಿಯ ಅಡಿಯಲ್ಲಿ ಉಲ್ಲೇಖಿಸಲಾದ ವಾಕ್ ಸ್ವಾತಂತ್ರ್ಯವನ್ನು ಹೊರತುಪಡಿಸಿ ಯಾವುದೇ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸಲಾಗುವುದಿಲ್ಲ ಎಂದು ಹೇಳಿದೆ.

ದೇಶದ ಯಾವುದೇ ಪ್ರಕರಣಗಳು, ವಿದ್ಯಮಾನಗಳಿಗೆ ಸಂಬಂಧಪಟ್ಟಂತೆ ಅಥವಾ ಸರ್ಕಾರವನ್ನು ರಕ್ಷಿಸುವ ರೀತಿಯ ಹೇಳಿಕೆಗಳನ್ನು ಸಚಿವರು ನೀಡಿದ್ದರೂ ಕೂಡ ಸಾಮೂಹಿಕ ಹೊಣೆಗಾರಿಕೆಯ ತತ್ವವನ್ನು ಅನ್ವಯಿಸುವ ಸರ್ಕಾರವನ್ನು ಸಚಿವರ ಹೇಳಿಕೆಯಿಂದ ದೂಷಿಸಲು ಅಥವಾ ಹೊಣೆಗಾರನನ್ನಾಗಿ ಮಾಡಲು ಸಾಧ್ಯವಿಲ್ಲ. ಸಂವಿಧಾನ ವಿಧಿ 19 (1) (ಎ) ಅಡಿಯಲ್ಲಿ ಮೂಲಭೂತ ಹಕ್ಕನ್ನು ದೇಶವನ್ನು ಹೊರತುಪಡಿಸಿ ಇತರರ ಮೇಲೂ ಚಲಾಯಿಸಬಹುದು ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಎ ಎಸ್ ಬೋಪಣ್ಣ, ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ನ್ಯಾಯಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರು ಮಾತ್ರ ಪ್ರತ್ಯೇಕ ತೀರ್ಪು ನೀಡಿದ್ದಾರೆ. ದೇಶದ ನಾಗರಿಕರಿಗೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಹೆಚ್ಚು ಅಗತ್ಯವಿರುವ ಹಕ್ಕಾಗಿದ್ದು, ಇದರಿಂದ ನಾಗರಿಕರಿಗೆ ಆಡಳಿತದ ಬಗ್ಗೆ ಉತ್ತಮ ತಿಳುವಳಿಕೆ ಮತ್ತು ಶಿಕ್ಷಣ ಸಿಗುತ್ತದೆ ಎಂದಿದ್ದಾರೆ. 

ಸಮಾಜದಲ್ಲಿ ದ್ವೇಷದ ಮಾತುಗಳು ಮತ್ತು ಭಾಷಣಗಳು ಮೂಲಭೂತ ಮೌಲ್ಯಗಳಿಗೆ ಧಕ್ಕೆಯನ್ನುಂಟುಮಾಡಿ ಅಸಮಾನತೆಯನ್ನುಂಟುಮಾಡುತ್ತದೆ. ವೈವಿಧ್ಯತೆ ಹೊಂದಿರುವ ಭಾರತದಂತಹ ದೇಶಗಳಲ್ಲಿ ನಾಗರಿಕರ ಮೇಲೆ ದಾಳಿ ನಡೆಸುತ್ತದೆ ಎಂದಿದ್ದಾರೆ. 

ಸಾರ್ವಜನಿಕ ಸೇವೆಯಲ್ಲಿರುವವರಿಗೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಮೇಲೆ ನಿರ್ಬಂಧಗಳನ್ನು ವಿಧಿಸಬಹುದೇ ಎಂಬ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಇಂದು ಈ ತೀರ್ಪು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com