ನೇಮಕಾತಿ 2023; CRPFನಲ್ಲಿ 1458 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್‌ಟೇಬಲ್‌, ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ಸಿಆರ್ ಪಿಎಫ್
ಸಿಆರ್ ಪಿಎಫ್
Updated on

ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್‌ಟೇಬಲ್‌, ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಹುದ್ದೆ: ಹೆಡ್ ಕಾನ್ಸ್‌ಟೇಬಲ್‌ (ಮಿನಿಸ್ಟರಿಯಲ್), ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್)
ಕರ್ತವ್ಯ ಸ್ಥಳ : ಭಾರತದೆಲ್ಲೆಡೆ
ಹುದ್ದೆಗಳ ಸಂಖ್ಯೆ: 1458

ಹುದ್ದೆಹುದ್ದೆಗಳ ಸಂಖ್ಯೆವೇತನ
ಹೆಡ್ ಕಾನ್ಸ್‌ಟೇಬಲ್‌ (ಮಿನಿಸ್ಟರಿಯಲ್) 1315 25500-81100 ರೂ
ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್) 143 29200-92300 ರೂ

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10+2/ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಾನ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ- 03 ವರ್ಷ
ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ

ಆಯ್ಕೆ ವಿಧಾನ : 
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್, ದೇಹದಾರ್ಢ್ಯತೆ ಪರೀಕ್ಷೆ (PST), ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ: 
ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ:
 ಜನರಲ್/ EWS/ ಒಬಿಸಿ ಅಭ್ಯರ್ಥಿಗಳು – ರೂ. 100
ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿ ವಿಧಾನ: ಅರ್ಜಿ ಶುಲ್ಕವನ್ನು ಆನ್ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 25, 2023
ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅಡ್ಮಿಟ್ ಕಾರ್ಡ್ ಪ್ರಕಟಿಸುವ ದಿನಾಂಕ: ಫೆಬ್ರವರಿ 15, 2023
ತಾತ್ಕಾಲಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ: ಫೆಬ್ರವರಿ 22-28, 2023

ಹೆಚ್ಚಿನ ಮಾಹಿತಿಗೆ ಅಧಿಸೂಚನೆ
https://ggle.io/5TZg

ಅರ್ಜಿ ಸಲ್ಲಿಸಲು
www.crpf.nic.in
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com