ಉತ್ತರ ಪ್ರದೇಶ: 18 ವರ್ಷದ ಯುವತಿ ಮೇಲೆ ಅತ್ಯಾಚಾರ, ಅಪರಾಧ ಮರೆಮಾಚಲು ಬಲವಂತವಾಗಿ ವಿಷ ಕುಡಿಸಿದ ಆರೋಪಿಗಳು

ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಬಲವಂತವಾಗಿ ವಿಷ ಕುಡಿಸಿದ ಆರೋಪದ ಮೇಲೆ ಒಂದೇ ಕುಟುಂಬದ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಪಿಲಿಭಿತ್: ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಬಲವಂತವಾಗಿ ವಿಷ ಕುಡಿಸಿದ ಆರೋಪದ ಮೇಲೆ ಒಂದೇ ಕುಟುಂಬದ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ.

ಎಫ್‌ಐಆರ್‌ನಲ್ಲಿ ದಾಖಲಾಗಿರುವ ಆರೋಪಗಳ ಪ್ರಕಾರ, ಜ. 1 ರಂದು ತನ್ನ ಮಗಳು ಯಾವುದೋ ಕೆಲಸಕ್ಕಾಗಿ ಹೊರಗೆ ಹೋಗಿದ್ದಳು. ಆಗ 22 ವರ್ಷದ ಪ್ರಮುಖ ಆರೋಪಿ ಕಮಲ್ ಕುಮಾರ್ ಎಂಬಾತ ಆಕೆಯನ್ನು ತನ್ನ ಮನೆಗೆ ಕರೆದೊಯ್ದಿದ್ದಾನೆ. ಮತ್ತು ಅಲ್ಲಿ ಆತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಮತ್ತು ಥಳಿಸಿದ್ದಾನೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.

ಸಂತ್ರಸ್ತೆಯ ಕಿರುಚಾಟವನ್ನು ಕೇಳಿದ ಆಕೆಯ ತಾಯಿ, ಕಮಲ್ ಕುಮಾರ್‌ನ ಮನೆಗೆ ಬಂದಿದ್ದಾರೆ. ಆದರೆ, ಆರೋಪಿಯ ಕುಟುಂಬ ಸದಸ್ಯರು ಈ ಅಪರಾಧವನ್ನು ಮರೆಮಾಚಲು ಯುವತಿಯನ್ನು ಕೊಲ್ಲುವ ಉದ್ದೇಶದಿಂದ ಆಕೆಯು ವಿಷ ಸೇವಿಸುವಂತೆ ಮಾಡಿದ್ದಾರೆ ಎಂದಿದ್ದಾರೆ.

ಬಳಿಕ ಆಕೆಯನ್ನು ತಮ್ಮ ಮನೆಯಿಂದ ಹೊರಗೆ ಎಸೆದಿದ್ದಾರೆ. ಸಂತ್ರಸ್ತೆಯ ತಾಯಿ ಲಿಖಿತ ದೂರಿನೊಂದಿಗೆ ಜಹಾನಾಬಾದ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದಾರೆ. ಆದರೆ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಬಳಿಕ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿದೆ.

ಆರೋಪಿಯ ಪೋಷಕರು, ಕಿರಿಯ ಸಹೋದರ, ಸಹೋದರಿ ಮತ್ತು ಅಜ್ಜಿ ಸೇರಿದಂತೆ ಪ್ರಮುಖ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 328 (ಯಾವುದೇ ವ್ಯಕ್ತಿಗೆ ವಿಷ ನೀಡುವುದು), 323 (ಸ್ವಯಂಪ್ರೇರಿತ ಗಾಯಗೊಳಿಸುವುದು), 504 ( ಉದ್ದೇಶಪೂರ್ವಕ ಅವಮಾನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‌ಎಚ್‌ಒ ಪ್ರಬಾಶ್ ಚಂದ್ರ ತಿಳಿಸಿದ್ದಾರೆ.

ಈವರೆಗೂ ಪ್ರಕರಣದಲ್ಲಿ ಯಾರೊಬ್ಬರನ್ನು ಬಂಧಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com