ಜುಬೈರ್ ಟ್ವೀಟ್ ನಿಂದ ಯಾವುದೇ ಅಪರಾಧ ಕಂಡುಬಂದಿಲ್ಲ: ಹೈಕೋರ್ಟ್‌ಗೆ ಪೊಲೀಸರ ಮಾಹಿತಿ

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ವಿವಾದಾತ್ಮಕ ಟ್ವೀಟ್ ನಿಂದ ಯಾವುದೇ ಅಪರಾಧ ಕಂಡುಬಂದಿಲ್ಲ ಎಂದು ದೆಹಲಿ ಪೊಲೀಸರು ಗುರುವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ. 
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್

ನವದೆಹಲಿ: ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ವಿವಾದಾತ್ಮಕ ಟ್ವೀಟ್ ನಿಂದ ಯಾವುದೇ ಅಪರಾಧ ಕಂಡುಬಂದಿಲ್ಲ ಎಂದು ದೆಹಲಿ ಪೊಲೀಸರು ಗುರುವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ. 

ಫ್ಯಾಕ್ಟ್ ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಬಗ್ಗೆ ದೆಹಲಿ ಪೊಲೀಸರು ದೆಹಲಿ ಹೈಕೋರ್ಟ್‌ನಲ್ಲಿ ಮಹತ್ವದ ಹೇಳಿಕೆ ನೀಡಿದ್ದು, 2020ರ ಆಗಸ್ಟ್‌ನಲ್ಲಿ ಮೊಹಮ್ಮದ್‌ ಜುಬೇರ್‌ ಮಾಡಿರುವ ಟ್ವೀಟ್‌ನಲ್ಲಿ ಯಾವುದೇ ಅಪರಾಧ ಕಂಡುಬಂದಿಲ್ಲ ಎಂದು ದೆಹಲಿ ಪೊಲೀಸರು ಹೈಕೋರ್ಟ್‌ಗೆ ತಿಳಿಸಿದ್ದಾರೆ. 

ಇದಾದ ನಂತರ ಸುಪ್ರೀಂ ಕೋರ್ಟ್ ಮೊಹಮ್ಮದ್ ಜುಬೈರ್‌ಗೆ ಜಾಮೀನು ನೀಡುವಾಗ ಆತನ ಬಂಧನದ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದೆ. ಮೊಹಮ್ಮದ್ ಜುಬೇರ್ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. 2020 ರಲ್ಲಿ ಮಾಡಿದ ಟ್ವೀಟ್ ಅನ್ನು ದೆಹಲಿ ಪೊಲೀಸರು ಹೈಕೋರ್ಟ್‌ನಲ್ಲಿ ಉಲ್ಲೇಖಿಸಿದ್ದರು. ಮತ್ತೊಂದೆಡೆ, ದೆಹಲಿ ಪೊಲೀಸರ ಪರ ಹಾಜರಾದ ವಕೀಲರು ಚಾರ್ಜ್ ಶೀಟ್‌ನಲ್ಲಿ ಜುಬೇರ್‌ನ ಹೆಸರಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅದೇ ಸಮಯದಲ್ಲಿ, ದೆಹಲಿ ಹೈಕೋರ್ಟ್ ಇದೀಗ ದೆಹಲಿ ಪೊಲೀಸರಿಗೆ ಚಾರ್ಜ್ ಶೀಟ್ ಸಲ್ಲಿಸುವಂತೆ ಕೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 2ಕ್ಕೆ ಮುಂದೂಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜುಬೈರ್ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣವನ್ನು ಪತ್ತೆ ಮಾಡಿಲ್ಲ, ಹೀಗಾಗಿ ಚಾರ್ಜ್ ಶೀಟ್‌ನಲ್ಲಿ ಜುಬೇರ್ ಹೆಸರನ್ನು ಉಲ್ಲೇಖಿಸಲಾಗಿಲ್ಲ ಎಂದು ದೆಹಲಿ ಪೊಲೀಸರ ಪರವಾಗಿ ವಕೀಲರಾದ ನಂದಿತಾ ರಾವ್ ಅವರು ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಭಾನಿ ಅವರ ಪೀಠಕ್ಕೆ ತಿಳಿಸಿದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com