ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದ ಯುವತಿ ಸಾವು, ತನಿಖೆಗೆ ಸಚಿವರ ಆದೇಶ

ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದ 20 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕಾಸರಗೋಡು: ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದ 20 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಪೆರುಂಬಳಾದ ಅಂಜು ಶ್ರೀಪಾರ್ವತಿ ಮೃತಪಟ್ಟ ಯುವತಿಯಾಗಿದ್ದಾಳೆ.

ಡಿಸೆಂಬರ್ 31 ರಂದು ರೊಮಾನ್ ಸಿಯಾ ಎಂಬ ರೆಸ್ಟೋರೆಂಟ್ ನಿಂದ ಆನ್ ಲೈನ್ ಮೂಲಕ ಬಿರಿಯಾನಿ ತರಿಸಿಕೊಂಡಿದ್ದ ಯುವತಿಯನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ತದನಂತರ ಮಂಗಳೂರಿನ ಮತ್ತೊಂದು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೃತ ಯುವತಿಯ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಕೇಸ್ ದಾಖಲಾಗಿದೆ. ಯುವತಿ ಇಂದು ಬೆಳಗ್ಗೆ ಮೃತಪಟ್ಟಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ ಆರೋಗ್ಯ ಸಚಿವೆ ವೀಣಾ ಜಾರ್ಜ್, ಘಟನೆ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಈ ವಾರದ ಆರಂಭದಲ್ಲಿ ಕೊಟ್ಟಯಂ ವೈದ್ಯಕೀಯ ಕಾಲೇಜಿನ ನರ್ಸ್ ಒಬ್ಬರು ಇದೇ ರೀತಿಯ ಆಹಾರ ಸೇವಿಸಿದ ನಂತರ ಮೃತಪಟ್ಟಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com