ಸಂಸದ ವರುಣ್ ಗಾಂಧಿ
ದೇಶ
1 ಕೋಟಿ ಸರ್ಕಾರಿ ಹುದ್ದೆಗಳು ಖಾಲಿ: ಬಿಜೆಪಿ ಸಂಸದ ವರುಣ್ ಗಾಂಧಿ
ದೇಶದಲ್ಲಿನ ನಿರುದ್ಯೋಗ ಕುರಿತು ಧ್ವನಿ ಎತ್ತಿರುವ ಬಿಜೆಪಿ ಸಂಸದ ವರುಣ್ ಗಾಂಧಿ, 1 ಕೋಟಿ ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಕೂಡಲೇ ಅವುಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪಿಲಿಬಿತ್: ದೇಶದಲ್ಲಿನ ನಿರುದ್ಯೋಗ ಕುರಿತು ಧ್ವನಿ ಎತ್ತಿರುವ ಬಿಜೆಪಿ ಸಂಸದ ವರುಣ್ ಗಾಂಧಿ, 1 ಕೋಟಿ ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಕೂಡಲೇ ಅವುಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಬೆಹೆರಿ ವಿಧಾನಸಭಾ ಕ್ಷೇತ್ರದ ಅರ್ಸಿಯಾಬೊಜ್ ಗ್ರಾಮದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ವರುಣ್ ಗಾಂಧಿ, ಖಾಲಿ ಹುದ್ದೆಗಳ ಭರ್ತಿಗೆ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ ಎಂದರು.
ಸಕ್ಕರೆ ಕಾರ್ಖಾನೆಗಳ ಮಾಲೀಕರು ಕೂಡಲೇ ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸಬೇಕು, ಇಲ್ಲವೇ ಪ್ರತಿಭಟನೆ ಎದುರಿಸಲು ಸಿದ್ಧರಾಗುವಂತೆ ಎಚ್ಚರಿಕೆ ನೀಡಿದರು.
ಇದೇ ವೇಳೆ ಬಿಡಾಡಿ ಜಾನುವಾರುಗಳಿಂದ ಬೆಳೆ ಹಾನಿ ಕುರಿತು ಪ್ರತಿಕ್ರಿಯಿಸಿದ ಸಂಸದರು, ಸರ್ಕಾರ ಮತ್ತು ಸಂಬಂಧಿತ ಇಲಾಖೆಗಳು ಈ ಸಮಸ್ಯೆಯನ್ನು ಪರಿಹರಿಸುವಂತೆ ಸೂಚನೆ ನೀಡಿದರು. ಪೊಲೀಸ್ ದೌರ್ಜನ್ಯ ಬಗ್ಗೆ ಅನೇಕ ದೂರುಗಳು ಬರುತ್ತಿರುವುದಾಗಿ ಅವರು ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ