ಉತ್ತರ ಪ್ರದೇಶ: ಕಾಂಗ್ರೆಸ್‌ನ ಮಾಜಿ ಶಾಸಕನ ಮೊಮ್ಮಗನನ್ನು ಹೊಡೆದು ಕೊಂದ ಗುಂಪು

ಕೊಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಉತ್ತರ ಪ್ರದೇಶದ ಮೌ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಾಜಿ ಕಾಂಗ್ರೆಸ್ ಶಾಸಕ, ದಿವಂಗತ ಕೇದಾರ್ ಸಿಂಗ್ ಅವರ 35 ವರ್ಷದ ಮೊಮ್ಮಗನನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೌ: ಕೊಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಉತ್ತರ ಪ್ರದೇಶದ ಮೌ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಾಜಿ ಕಾಂಗ್ರೆಸ್ ಶಾಸಕ, ದಿವಂಗತ ಕೇದಾರ್ ಸಿಂಗ್ ಅವರ 35 ವರ್ಷದ ಮೊಮ್ಮಗನನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹುವಾರ್ ಗ್ರಾಮದಲ್ಲಿ ಹಿಮಾಂಶು ಸಿಂಗ್ ಅವರನ್ನು ಏಳರಿಂದ ಎಂಟು ಜನರು ಹೊಡೆದು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವಿಷಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಮತ್ತು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮೌ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತ್ರಿಭುವನ್ ನಾಥ್ ತ್ರಿಪಾಠಿ ತಿಳಿಸಿದ್ದಾರೆ.

ಪೊಲೀಸರು ಸಂತ್ರಸ್ತರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಹಿಮಾಂಶು ಸಿಂಗ್ 1980ರಲ್ಲಿ ಘೋಸಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ದಿವಂಗತ ಕೇದಾರ್ ಸಿಂಗ್ ಅವರ ಮೊಮ್ಮಗ.

ಕೋಪಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಲೈರೋ ಡೊನ್ವಾರ್ ಗ್ರಾಮದಲ್ಲಿ ಪಂಚಾಯತ್‌ಗೆ ಹೋಗಿದ್ದ ಅವರು ಅಲ್ಲಿ ಜನರ ಗುಂಪಿನೊಂದಿಗೆ ವಾಗ್ವಾದ ನಡೆಸಿದ್ದರು. ಈ ವೇಳೆ ಉದ್ರಿಕ್ತ ಗುಂಪು ಅವರನ್ನು ದೊಣ್ಣೆಗಳಿಂದ ಚೆನ್ನಾಗಿ ಥಳಿಸಿದೆ.

ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com