ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಗೆ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವಿದೆ: ಶತ್ರುಘ್ನ ಸಿನ್ಹಾ

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಗೆ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವಿದೆ ಎಂದು ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಗೆ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವಿದೆ ಎಂದು ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆಯನ್ನು ಐತಿಹಾಸಿಕ ಮತ್ತು ಕ್ರಾಂತಿಕಾರಿ ಯಾತ್ರೆ ಎಂದು ಬಣ್ಣಿಸಿದ ಅವರು, ರಾಹುಲ್ ಗಾಂಧಿ ಉತ್ತಮ ನಾಯಕರಾಗಿ ಹೊರಹೊಮ್ಮಿದ್ದಾರೆ ಮತ್ತು ಪ್ರಧಾನಿಯಾಗುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು. ರಾಹುಲ್ ಗಾಂಧಿಗೆ ಪ್ರಧಾನಿಯಾಗುವ ಸಾಮರ್ಥ್ಯವಿದೆ. ಅವರ ಕುಟುಂಬದ ಸದಸ್ಯರು ಪ್ರಧಾನಿಯಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ ಮತ್ತು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

ಕೆಲವರು ರಾಹುಲ್ ಗಾಂಧಿಯವರ ಇಮೇಜ್ ಅನ್ನು ನಾಶಮಾಡಲು ಪ್ರಯತ್ನಿಸುತ್ತಾರೆ ಆದರೆ ಅವರು ದೇಶದ ಅತ್ಯಂತ ಗಂಭೀರ ನಾಯಕರಾಗಿ ಹೊರಹೊಮ್ಮಿದ್ದಾರೆ. ಲೋಕಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಮುಂಬರುವ ಲೋಕಸಭೆ ಚುನಾವಣೆ ಮೇಲೆ ಭಾರತ್ ಜೋಡೋ ಯಾತ್ರೆ ಪ್ರಭಾವ ಬೀರಲಿದೆ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

ಅಡ್ವಾಣಿಯವರ ರಥಯಾತ್ರೆಯೊಂದಿಗೆ ಹೋಲಿಕೆ ಭಾರತ್ ಜೋಡೋ ಯಾತ್ರೆಯನ್ನು ಎಲ್‌ಕೆ ಅಡ್ವಾಣಿ ಮತ್ತು ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ರಥಯಾತ್ರೆಯೊಂದಿಗೆ ಹೋಲಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧವೂ ವಾಗ್ದಾಳಿ ನಡೆಸಿದರು. 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಬಿಜೆಪಿ ಯಾವಾಗಲೂ ಕೇಳುತ್ತದೆ, ದೇಶಕ್ಕೆ ಐಐಟಿ ಮತ್ತು ಐಐಎಂನಂತಹ ಸಂಸ್ಥೆಗಳನ್ನು ಕೊಟ್ಟವರು ಯಾರು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com