
ಹಾಸನ: ಸಕಲೇಶಪುರ ಅರಣ್ಯಾಧಿಕಾರಿ ಎಸ್ಎಲ್ ಶಿಲ್ಪಾ ಅವರನ್ನು ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.
ಬೆಂಗಳೂರಿನಲ್ಲಿರುವ ಪ್ರಧಾನ ಮತ್ತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ಅಮಾನತು ಆದೇಶವನ್ನು ಪ್ರಕಟಿಸಿದ್ದಾರೆ. ಅರಣ್ಯದಲ್ಲಿ ನಡೆಯುತ್ತಿರುವ ಕಳ್ಳತನವನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂಬ ಕಾರಣ ನೀಡಿ ಅಮಾನತುಗೊಳಿಸಲಾಗಿದೆ.
ಅಷ್ಟೇ ಅಲ್ಲದೇ ಅರಣ್ಯದಲ್ಲಿ ಕಳವಾಗಿರುವ ಪ್ರಕರಣಗಳ ತನಿಖೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಭೌತಿಕ ಹಾಗೂ ಆರ್ಥಿಕ ಟಾರ್ಗೆಟ್ ಗಳನ್ನು ತಲುಪಲು ಅರಣ್ಯಾಧಿಕಾರಿ ವಿಫಲರಾಗಿದ್ದಾರೆ. ಆನೆಗಳ ಕಾಟವನ್ನು ತಡೆಗಟ್ಟಲು ವಿಫಲರಾಗಿದ್ದಾರೆ, ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಅರಣ್ಯಾಧಿಕಾರಿಗಳು ವಿಫಲರಾಗಿದ್ದಾರೆ ಎಂಬುದೇ ಮೊದಲಾದ ಆರೋಪಗಳನ್ನು ಎಸ್ಎಲ್ ಶಿಲ್ಪಾ ಅವರ ವಿರುದ್ಧ ಹೊರಿಸಲಾಗಿದೆ.
ಎಸ್ಎಲ್ ಶಿಲ್ಪಾ ಅವರು ನಿರಂತರ ನಿರ್ದೇಶನ ಹಾಗೂ ಎಚ್ಚರಿಕೆಯ ಹೊರತಾಗಿಯೂ ತಪ್ಪುಗಳನ್ನು ಸರಿಪಡಿಸಿಕೊಳ್ಳಲಿಲ್ಲ. ಈ ಹಿನ್ನೆಲೆಯಲ್ಲಿ ಪಿಸಿಸಿಎಫ್ ಸಹ ಆಕೆಯ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದರು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Advertisement