ಮಹದಾಯಿ ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

ಗೋವಾ ಮತ್ತು ಕರ್ನಾಟಕ ನಡುವೆ ನಡೆಯುತ್ತಿರುವ ಮಹದಾಯಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗುರುವಾರ, ಈ ಸಮಸ್ಯೆಗೆ ಪರಿಹಾರವನ್ನು ಶೀಘ್ರವಾಗಿ ರೂಪಿಸಲಾಗುವುದು ಎಂದು ಹೇಳಿದ್ದಾರೆ.
ಗಜೇಂದ್ರ ಸಿಂಗ್ ಶೇಖಾವತ್
ಗಜೇಂದ್ರ ಸಿಂಗ್ ಶೇಖಾವತ್

ಪಣಜಿ: ಗೋವಾ ಮತ್ತು ಕರ್ನಾಟಕ ನಡುವೆ ನಡೆಯುತ್ತಿರುವ ಮಹದಾಯಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗುರುವಾರ, ಈ ಸಮಸ್ಯೆಗೆ ಪರಿಹಾರವನ್ನು ಶೀಘ್ರವಾಗಿ ರೂಪಿಸಲಾಗುವುದು ಎಂದು ಹೇಳಿದ್ದಾರೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗ ಗುರುವಾರ ದೆಹಲಿಯ ತಮ್ಮ ನಿವಾಸದಲ್ಲಿ ಅವರನ್ನು ಭೇಟಿ ಮಾಡಿರುವುದಾಗಿ ಗಜೇಂದ್ರ ಸಿಂಗ್ ಶೇಖಾವತ್ ಟ್ವೀಟ್ ಮಾಡಿದ್ದಾರೆ.

ಮಹದಾಯಿ ನದಿಯ ಉಪನದಿಗಳಾದ ಕಳಸಾ ಮತ್ತು ಬಂಡೂರಿಗೆ ಕರ್ನಾಟಕ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ನೀರನ್ನು ತಿರುಗಿಸುವ ವಿಚಾರದಲ್ಲಿ ಗೋವಾ ಮತ್ತು ಕರ್ನಾಟಕದ ಮಧ್ಯೆ ವಿವಾದವಿದೆ.

ಉತ್ತರ ಗೋವಾದ ಕೆಳಭಾಗದಲ್ಲಿರುವ ಮಹದಾಯಿ ವನ್ಯಜೀವಿ ಅಭಯಾರಣ್ಯದ ಮೂಲಕ ಹಾದುಹೋಗುವ ಮಹದಾಯಿ ನದಿಯ ನೀರನ್ನು ಕರ್ನಾಟಕವು ತಿರುಗಿಸಲು ಸಾಧ್ಯವಿಲ್ಲ ಎಂದು ಗೋವಾ ಸರ್ಕಾರ ವಾದಿಸಿದೆ.

ಎರಡು ಅಣೆಕಟ್ಟುಗಳ ನಿರ್ಮಾಣಕ್ಕಾಗಿ ಕರ್ನಾಟಕ ಸರ್ಕಾರ ಸಲ್ಲಿಸಿದ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಕೇಂದ್ರವು ಇತ್ತೀಚೆಗೆ ಅನುಮೋದಿಸಿದೆ.

ಗೋವಾ ಮುಖ್ಯಮಂತ್ರಿ ಸಾವಂತ್ ನೇತೃತ್ವದ ನಿಯೋಗ ಬುಧವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಹದಾಯಿ ನದಿ ನೀರು ತಿರುಗಿಸುವುದಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಪರಿಹರಿಸಲು ತಕ್ಷಣವೇ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಒತ್ತಾಯಿಸಿದೆ.

ಗುರುವಾರ ನಿಯೋಗವು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಸಚಿವ ಶೇಖಾವತ್ ಅವರನ್ನು ಭೇಟಿ ಮಾಡಿತು.
ಸಭೆಯ ನಂತರ ಶೇಖಾವತ್ ಅವರು ಟ್ವೀಟ್‌ನಲ್ಲಿ, ಗೋವಾ ಮುಖ್ಯಮಂತ್ರಿಗಳು ಇತರ ಪ್ರತಿನಿಧಿಗಳೊಂದಿಗೆ ನನ್ನ ದೆಹಲಿ ನಿವಾಸದಲ್ಲಿ ನನ್ನನ್ನು ಭೇಟಿಯಾಗಲು ಬಂದಿದ್ದರು. ಮಹದಾಯಿ ನದಿ ನೀರು ಹಂಚಿಕೆ ಕುರಿತು ಚರ್ಚೆ ನಡೆಸಿದ್ದೇವೆ. ಖಂಡಿತವಾಗಿಯೂ, ಈ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರವನ್ನು ಕಂಡುಕೊಳ್ಳಲು ಕೆಲಸ ಮಾಡಲಾಗುವುದು ಎಂದಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗಿನ ಸಭೆಯ ಸಂದರ್ಭದಲ್ಲಿ ಸಾವಂತ್ ಬುಧವಾರ ಮಾತನಾಡಿ, 'ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ'ವನ್ನು ತಕ್ಷಣವೇ ರಚಿಸಬೇಕು ಮತ್ತು ಕೇಂದ್ರ ಜಲ ಆಯೋಗವು ಮಂಜೂರು ಮಾಡಿದ ಡಿಪಿಆರ್ (ಕರ್ನಾಟಕದ) ಅನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 2019ರಲ್ಲಿ ಅಂತರರಾಜ್ಯ ಜಲ ವಿವಾದ ನ್ಯಾಯಮಂಡಳಿ ನೀಡಿದ ಆದೇಶವನ್ನು ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರಗಳು ಪ್ರಶ್ನಿಸಿವೆ. ಸದ್ಯ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com