ದೆಹಲಿ-ಪುಣೆ ವಿಮಾನದಲ್ಲಿ ಬಾಂಬ್ ಬೆದರಿಕೆ ಕರೆ: ಪ್ರಯಾಣಿಕರಲ್ಲಿ ಆತಂಕ; 30 ದಿನಗಳಲ್ಲಿ 3 ಬಾರಿ ಹುಸಿ ಬಾಂಬ್!

ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿ-ಪುಣೆ ಸ್ಪೈಸ್ ಜೆಟ್ ವಿಮಾನ ಗುರುವಾರ ಟೇಕಾಫ್ ಆಗುವ ಮೊದಲು ಬಾಂಬ್ ಇರುವುದಾಗಿ ಬಂದ ಅಪರಿಚಿತ ಕರೆಯಿಂದಾಗಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿ-ಪುಣೆ ಸ್ಪೈಸ್ ಜೆಟ್ ವಿಮಾನ ಗುರುವಾರ ಟೇಕಾಫ್ ಆಗುವ ಮೊದಲು ಬಾಂಬ್ ಇರುವುದಾಗಿ ಬಂದ ಅಪರಿಚಿತ ಕರೆಯಿಂದಾಗಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಅಧಿಕಾರಿಗಳ ಪ್ರಕಾರ ಅದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ಬಂದಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ವಿಮಾನವನ್ನು ಪರಿಶೀಲಿಸಲಾಗುತ್ತಿದೆ. ಕರೆ ಬಂದಾಗ ಪ್ರಯಾಣಿಕರು ಬೋರ್ಡಿಂಗ್ ಗೇಟ್ ನಲ್ಲಿದ್ದರು ಮತ್ತು ವಿಮಾನದ ಒಳಗೆ ಇರಲಿಲ್ಲ ಎಂದು ಅವರು ಹೇಳಿದರು.

ಎಸ್‌ಜಿ 8938 ವಿಮಾನದ ನಿರ್ಗಮನ ಸಮಯ ಸಂಜೆ 5.35 ಆಗಿತ್ತು ಎಂದು ಮೂಲಗಳು ತಿಳಿಸಿವೆ. ಅದರಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದ ನಂತರ ಎರಡು ಅಗ್ನಿಶಾಮಕ ವಾಹನಗಳು ತಕ್ಷಣವೇ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದವು”ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪುವ ಮುನ್ನವೇ ಮಧ್ಯದಲ್ಲಿ ಬಾಂಬ್ ಕರೆ ಸುಳ್ಳು ಎಂಬ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರೆ ಸ್ವೀಕರಿಸಿದಾಗ ಪ್ರಯಾಣಿಕರು ಬೋರ್ಡಿಂಗ್ ಗೇಟ್‌ನಲ್ಲಿದ್ದರು ಮತ್ತು ವಿಮಾನದೊಳಗೆ ಇರಲಿಲ್ಲ ಎಂದು ಅವರು ಹೇಳಿದರು.

‘ಸಿಐಎಸ್ಎಫ್ ಮತ್ತು ದೆಹಲಿ ಪೊಲೀಸ್‌ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ. ವಿಮಾನದಲ್ಲಿ ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತು ಕಂಡು ಬಂದಿಲ್ಲ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕರೆ ಮಾಡಿದವನನ್ನು ಪತ್ತೆ ಹಚ್ಚಲು ಹಾಗೂ ಅದು ಹುಸಿ ಕರೆಯೇ ಎಂದು ಖಚಿತಪಡಿಸಿಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ಹೇಳಿದರು. ಕಳೆದ 30 ದಿನಗಳಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಮೂರನೇ ಬಾರಿಗೆ ಹುಸಿ ಬಾಂಬ್ ಕರೆ ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com