ಲಂಡನ್: ಇಂಡಿಯನ್ ಪ್ರೀಮಿಯರ್ ಲೀಗ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಖಾಸಗಿ ಆಸ್ವತ್ರೆಗೆ ದಾಖಲಿಸಿ ಕೃತಕ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಲಲಿತ್ ಮೋದಿ ಅವರು ಕೊರೋನಾ ಸೋಂಕು ಮತ್ತು ನ್ಯುಮೋನಿಯಾಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಬಾಹ್ಯ ಆಮ್ಲಜನಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಲಲಿತ್ ಮೋದಿ ಇನ್ಸ್ಟಾಗ್ರಾಮ್ ನಲ್ಲಿ ಮಾಹಿತಿ ನೀಡಿದ್ದು, ಎರಡು ವಾರಗಳಲ್ಲಿ ಎರಡು ಬಾರಿ ಕೋವಿಡ್ ಸೋಂಕಿಗೆ ಒಳಗಾಗಿದ್ದು, 'ಆಳವಾದ ನ್ಯುಮೋನಿಯಾ' ಹೊಂದಿದ್ದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಅಂತೆಯೇ ಅಂತಿಮವಾಗಿ ಇಬ್ಬರು ವೈದ್ಯರು ಮತ್ತು ಸೂಪರ್‌ಸ್ಟಾರ್ ಸೂಪರ್-ದಕ್ಷ ಮಗನೊಂದಿಗೆ ಏರ್ ಆಂಬ್ಯುಲೆನ್ಸ್ ಮೂಲಕ ಬಂದಿಳಿದೆ. ಅವರು ಲಂಡನ್‌ನಲ್ಲಿ ನನಗಾಗಿ ತುಂಬಾ ಶ್ರಮಿಸಿದ್ದಾರೆ. ಹಾರಾಟ ಸುಗಮವಾಗಿತ್ತು. ದುರದೃಷ್ಟವಶಾತ್, ಇನ್ನೂ 24/7 ಬಾಹ್ಯ ಆಮ್ಲಜನಕ ವ್ಯವಸ್ಥೆಯಲ್ಲಿರಬೇಕು.. ಎಂದು ಪೋಸ್ಟ್ ಮಾಡಿದ್ದಾರೆ.
Advertisement