ಶರದ್ ಯಾದವ್ ಪಾರ್ಥಿವ ಶರೀರ
ದೇಶ
ಮಧ್ಯ ಪ್ರದೇಶ: ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ
ಹಿರಿಯ ಸಮಾಜವಾದಿ ನಾಯಕ ಮತ್ತು ಜನತಾ ದಳ(ಯುನೈಟೆಡ್) ಮಾಜಿ ಅಧ್ಯಕ್ಷ ಶರದ್ ಯಾದವ್ ಅವರ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಅವರ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ...
ಭೋಪಾಲ್: ಹಿರಿಯ ಸಮಾಜವಾದಿ ನಾಯಕ ಮತ್ತು ಜನತಾ ದಳ(ಯುನೈಟೆಡ್) ಮಾಜಿ ಅಧ್ಯಕ್ಷ ಶರದ್ ಯಾದವ್ ಅವರ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಅವರ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಮಾಜಿ ಕೇಂದ್ರ ಸಚಿವರ ಶರದ್ ಯಾದವ್ ಅವರ ಪುತ್ರ ಶಂತನು ಬುಂದೇಲಾ ಮತ್ತು ಅವರ ಪುತ್ರಿ ಸುಭಾಸಿನಿ ಅವರು ಇಂದು ಸಂಜೆ 5 ಗಂಟೆ ಸುಮಾರಿಗೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.
ಇದನ್ನು ಓದಿ: ಜೆಡಿಯು ಸಂಸ್ಥಾಪಕ ಅಧ್ಯಕ್ಷರಾಗಿದ್ದ ಶರದ್ ಯಾದವ್ ನಿಧನ!
75 ವರ್ಷದ ಶರದ್ ಯಾದವ್ ಅವರು ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
ಯಾದವ್ ಅವರ ಪಾರ್ಥಿವ ಶರೀರವನ್ನು ದೆಹಲಿಯಿಂದ ಭೋಪಾಲ್ ಚಾರ್ಟರ್ಡ್ ವಿಮಾನದಲ್ಲಿ ತರಲಾಯಿತು. ಬಳಿಕ ಪಾರ್ಥಿವ ಶರೀರವನ್ನು ರಸ್ತೆಯ ಮೂಲಕ ಅಂಕ್ಮೌಗೆ ಕೊಂಡೊಯ್ಯಲಾಯಿತು.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

