
ನವದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ಹೃದಯಾಘಾತದಿಂದ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಸಂತೋಖ್ ಸಿಂಗ್ ಚೌಧರಿ ಜಿ ಅವರ ನಿಧನದಿಂದ ನೋವಾಗಿದೆ. ಪಂಜಾಬ್ ಜನರ ಸೇವೆಗಾಗಿ ಅವರು ಮಾಡಿದ ಪ್ರಯತ್ನಗಳನ್ನು ಸ್ಮರಿಸಲಾಗುವುದು ಎಂದು ಅವರು ಹೇಳಿದ್ದು, ಚೌಧರಿ ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ಸಂತಾಪ ಸೂಚಿಸಿದ್ದಾರೆ.
ಜಲಂಧರ್ ನ ಎರಡು ಬಾರಿ ಸಂಸದರಾಗಿದ್ದ ಚೌಧರಿ ಅವರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾಗಿ ಕಾಂಗ್ರೆಸ್ ಮುಖಂಡ ಪ್ರತಾಪ್ ಸಿಂಗ್ ಬಾಜ್ವಾ ಹೇಳಿದ್ದಾರೆ.
Advertisement