ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಇಳಿಕೆ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 104 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,149ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 104 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,149ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,81,040ಕ್ಕೆ ಏರಿಕೆಯಾಗಿದೆ. ಈವರೆಗೆ 5,30,726 ಮಂದಿ ಸಾವಿಗೀಡಾಗಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಇನ್ನು ದೇಶದಲ್ಲಿ ಈವರೆಗೆ 4,41,48,165 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 220.17 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com