ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 114 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 114 ಹೊಸ ಪ್ರಕರಣ ಪತ್ತೆಯಾಗಿದೆ. ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 114 ಹೊಸ ಪ್ರಕರಣ ಪತ್ತೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 114 ಹೊಸ ಪ್ರಕರಣ ಪತ್ತೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ  4,46,81,154ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ  5,30,726ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,119ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 144 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ  4,41,48,309ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 74,320 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 91,33,29,336 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.    

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,17,06,017 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com