ಕೋವಿಡ್-19: ಭಾರತದಲ್ಲಿ 24 ಗಂಟೆಗಳಲ್ಲಿ 128 ಹೊಸ ಪ್ರಕರಣಗಳು, ಕರ್ನಾಟಕದಲ್ಲಿ ಒಬ್ಬರು ಸೇರಿ ಇಬ್ಬರು ಸಾವು

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 128 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,998ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 128 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,998ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,81,361ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಂದು ಸಾವು ಸೇರಿ ಈವರೆಗೆ 5,30,728 ಮಂದಿ ಸಾವಿಗೀಡಾಗಿದ್ದಾರೆ ಎಂದು ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿಯಲ್ಲಿ ತಿಳಿದುಬಂದಿದೆ

ದೈನಂದಿನ ಪಾಸಿಟಿವಿಟಿ ದರ ಶೇ 0.07ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ ಶೇ 0.09ರಷ್ಟಿದೆ. ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ. ದೇಶದಲ್ಲಿ ಈವರೆಗೆ 4,41,48,645 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸಚಿವಾಲಯದ ವೆಬ್‌ಸೈಟ್‌ನಲ್ಲಿನ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.18ಕ್ಕೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com