ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರನ ಜಾಮೀನು ಅರ್ಜಿಗೆ ಉತ್ತರ ಪ್ರದೇಶ ಸರ್ಕಾರ ವಿರೋಧ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರನ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರನ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧಿಸಿದೆ.

ಉತ್ತರ ಪ್ರದೇಶದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಅವರು ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೆಕೆ ಮಹೇಶ್ವರಿ ಅವರ ಪೀಠಕ್ಕೆ ಈ ಅಪರಾಧವು ಗಂಭೀರವಾಗಿದೆ ಎಂದು ಹೇಳಿದರು.

'ಇದೊಂದು ಘೋರ ಮತ್ತು ಗಂಭೀರ ಅಪರಾಧವಾಗಿದ್ದು, ಸಮಾಜಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ' ಎಂದು ಅವರು ಹೇಳಿದರು.

ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಕಳೆದ ವರ್ಷ ಅಕ್ಟೋಬರ್‌ 3ರಂದು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಆಶಿಶ್‌ ಮಿಶ್ರಾ ಹಾಗೂ ಅವರ ಬೆಂಗಾವಲು ಪಡೆಯ ವಾಹನಗಳು ಚಲಿಸಿದ್ದವು. ಬಳಿಕ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟಿದ್ದರು.

ಉತ್ತರ ಪ್ರದೇಶ ಪೊಲೀಸ್ ಎಫ್‌ಐಆರ್ ಪ್ರಕಾರ, ಆಶಿಶ್ ಮಿಶ್ರಾ ಕುಳಿತಿದ್ದ ಎಸ್‌ಯುವಿಯಿಂದ ನಾಲ್ವರು ರೈತರು ಸಾವಿಗೀಡಾಗಿದ್ದಾರೆ. ಘಟನೆಯ ನಂತರ, ಕೋಪಗೊಂಡ ರೈತರು ಚಾಲಕ ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಕೊಂಡಿದ್ದರು.
ಹಿಂಸಾಚಾರದಲ್ಲಿ ಒಬ್ಬ ಪತ್ರಕರ್ತರೂ ಮೃತಪಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com