ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 131 ಹೊಸ ಪ್ರಕರಣ, ಇಬ್ಬರು ಸಾವು

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 131 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,940ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 131 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,940ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,81,781ಕ್ಕೆ ಏರಿಕೆಯಾಗಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಂದು ಸಾವು ಸೇರಿದಂತೆ ಈವರೆಗೆ 5,30,730 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ದೈನಂದಿನ ಮತ್ತು ವಾರದ ಪಾಸಿಟಿವಿಟಿ ದರ ಶೇ 0.08ರಷ್ಟಿದ್ದು, ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ ಈವರೆಗೆ 4,41,49,111 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ.
ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.24 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com