ಉತ್ತರ ಪ್ರದೇಶ: ರಾಷ್ಟ್ರಗೀತೆಗೆ ಅವಮಾನ ಮಾಡಿದ ಇಬ್ಬರನ್ನು ಬಂಧಿಸಿದ ಪೊಲೀಸರು

ಮೀರತ್ ಜಿಲ್ಲೆಯ ಈದ್ಗಾ ಪ್ರದೇಶದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಬಂಧಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮೀರತ್: ಮೀರತ್ ಜಿಲ್ಲೆಯ ಈದ್ಗಾ ಪ್ರದೇಶದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಬಂಧಿಸಲಾಗಿದೆ.

ರಾಷ್ಟ್ರಗೀತೆಯನ್ನು ನುಡಿಸುವಾಗ ಅವರು ನೃತ್ಯ ಮಾಡುತ್ತಿರುವ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ರೈಲ್ವೆ ರಸ್ತೆ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಸಂಜಯ್ ಶರ್ಮಾ ಮಾತನಾಡಿ, 'ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ, ತನಿಖೆ ಮುಂದುವರೆದಿದೆ. ಅವರ ವಿರುದ್ಧ ಭಾರತ ಧ್ವಜ ಸಂಹಿತೆಯ ಸೆಕ್ಷನ್ 2 (ರಾಷ್ಟ್ರ ಗೌರವಕ್ಕೆ ಅವಮಾನ ತಡೆಗಟ್ಟುವಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

ಈ ಸಂಬಂಧ ಹಿಂದೂ ಮಹಾಸಭಾದ ಮಾಜಿ ಅಧ್ಯಕ್ಷ ಸಚಿನ್ ಸಿರೋಹಿ ದೂರು ದಾಖಲಿಸಿದ್ದರು.

ಆರೋಪಿಗಳಲ್ಲಿ ಒಬ್ಬಾತ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದ. ನಂತರ ಮೂಲವೊಂದು ವಿವಾದಾತ್ಮಕ ವಿಡಿಯೋವನ್ನು ಡೌನ್‌ಲೋಡ್ ಮಾಡಿ ನನ್ನೊಂದಿಗೆ ಹಂಚಿಕೊಂಡಿದೆ. ನಾವು ಈ ವಿಚಾರವನ್ನು ಬೆಳಕಿಗೆ ತಂದ ನಂತರ ರೈಲ್ವೆ ರಸ್ತೆ ಪೊಲೀಸರು ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com