ಸರ್ವಪಕ್ಷ ಸಭೆ: ಸಂಸತ್ತಿನಲ್ಲಿ ಅದಾನಿ ಗ್ರೂಪ್ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳ ಒತ್ತಾಯ

ನಾಳೆಯಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ನಿಯಮಗಳ ಅಡಿಯಲ್ಲಿ ಪ್ರತಿಯೊಂದು ವಿಷಯವನ್ನು ಚರ್ಚಿಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ ಮತ್ತು  ಕಲಾಪವನ್ನು ಸುಗಮವಾಗಿ ನಡೆಸಲು...
ಸರ್ವಪಕ್ಷ ಸಭೆ
ಸರ್ವಪಕ್ಷ ಸಭೆ

ನವದೆಹಲಿ: ನಾಳೆಯಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ನಿಯಮಗಳ ಅಡಿಯಲ್ಲಿ ಪ್ರತಿಯೊಂದು ವಿಷಯವನ್ನು ಚರ್ಚಿಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ ಮತ್ತು  ಕಲಾಪವನ್ನು ಸುಗಮವಾಗಿ ನಡೆಸಲು ಪ್ರತಿಪಕ್ಷಗಳ ಸಹಕಾರ ಕೋರಿದೆ.

ಇಂದು ನಡೆದ ಸರ್ವಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ಆರ್‌ಜೆಡಿಯ ಮನೋಜ್ ಝಾ, ಡಿಎಂಕೆ, ಎಡಪಕ್ಷಗಳು ಮತ್ತು ಇತರರು ಅದಾನಿ ಗ್ರೂಪ್ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಧಿವೇಶನದಲ್ಲಿ ಸಂಸತ್ತಿನಲ್ಲಿ ಈ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ನ ವರದಿಯ ಬಳಿಕ ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಷೇರುಗಳು ಒಂದೇ ಸಮನೆ ಕುಸಿತ ಕಾಣುತ್ತಿದ್ದು, ಈ ಕಂಪನಿಗಳಲ್ಲಿ ಹೂಡಿಕೆ ಮಾಡಿದವರೂ ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಆದರೆ ಹಿಂಡನ್‌ಬರ್ಗ್‌ ರಿಸರ್ಚ್‌ ವರದಿಯನ್ನು ಅದಾನಿ ಗ್ರೂಪ್ ಸ್ಪಷ್ಟವಾಗಿ ತಳ್ಳಿಹಾಕಿದೆ.

ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಸರ್ಕಾರ ಇಂದು ಕರೆದಿದ್ದ ಸರ್ವಪಕ್ಷ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಸಂಸತ್ತಿನಲ್ಲಿ ಪ್ರತಿಯೊಂದು ವಿಷಯದ ಬಗ್ಗೆ ನಿಯಮಗಳ ಅಡಿಯಲ್ಲಿ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು. ಸದನವನ್ನು ಸುಗಮವಾಗಿ ನಡೆಸಲು ನಾವು ಪ್ರತಿಪಕ್ಷಗಳ ಸಹಕಾರವನ್ನು ಕೋರುತ್ತೇವೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com