ನವದೆಹಲಿ: ಇಂದು ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆಯ ದಿನವಾಗಿದ್ದು, ಅವರ ಚಿಂತನೆ, ಆದರ್ಶಗಳನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ. ಮಹಾತ್ಮ ಗಾಂಧೀಜಿ ಮರಣ ಹೊಂದಿದ ದಿನವನ್ನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ.
ಬಾಪು ಅವರ ಪುಣ್ಯ ತಿಥಿಯಂದು ಅವರಿಗೆ ಪ್ರಣಾಮಗಳು. ಅವರ ಆಳವಾದ ಆಲೋಚನೆಗಳನ್ನು ನೆನಪಿಸಿಕೊಳ್ಳುತ್ತೇನೆ. ರಾಷ್ಟ್ರ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸುವುದಾಗಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಹುತಾತ್ಮರ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಮತ್ತು ಭಾರತದ ಅಭಿವೃದ್ಧಿಗಾಗಿ ಕೆಲಸ ಮಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ ಎಂದಿದ್ದಾರೆ.
Advertisement