ಭಾರತ್ ಜೋಡೋ ಯಾತ್ರೆ: ಶ್ರೀನಗರ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಇಂದು ಅಧಿಕೃತವಾಗಿ ತೆರೆ ಬೀಳಲಿದ್ದು,  ಜಮ್ಮು-ಕಾಶ್ಮೀರದ ಶ್ರೀನಗರದ ಶೇರ್ ಕಾಶ್ಮೀರ್ ಕ್ರೀಡಾಂಗಣದಲ್ಲಿ  ಸಮಾರೋಪ ಸಮಾರಂಭ  ನಡೆಯಲಿದೆ.
ಎಐಸಿಸಿ ಅಧ್ಯಕ್ಷೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತಿತರರು
ಎಐಸಿಸಿ ಅಧ್ಯಕ್ಷೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತಿತರರು
Updated on

ಶ್ರೀನಗರ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಇಂದು ಅಧಿಕೃತವಾಗಿ ತೆರೆ ಬೀಳಲಿದ್ದು, ಜಮ್ಮು-ಕಾಶ್ಮೀರದ ಶ್ರೀನಗರದ ಶೇರ್ ಕಾಶ್ಮೀರ್ ಕ್ರೀಡಾಂಗಣದಲ್ಲಿ ಸಮಾರೋಪ ಸಮಾರಂಭ  ನಡೆಯಲಿದೆ.

ಇದಕ್ಕೂ ಮುನ್ನಾ ಶ್ರೀನಗರದ ಕಾಂಗ್ರೆಸ್ ಕಚೇರಿಯಲ್ಲಿಂದು ತ್ರಿವರ್ಣ ಧ್ವಜರೋಹಣ ಮಾಡಲಾಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಪಕ್ಷದ ನೂರಾರು ಮುಖಂಡರು ಉಪಸ್ಥಿತರಿದ್ದರು. 

ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ ಈ ಯಾತ್ರೆ ಯಶಸ್ವಿಯಾಗಿ 150 ದಿನಗಳ ಕಾಲ 3,570 ಕಿಲೋ ಮೀಟರ್ ದೂರು ಸಂಚರಿಸುವ ಮೂಲಕ ಯಶಸ್ವಿಯಾಗಿದೆ. ಸಮಾರೋಪದಲ್ಲಿ ಬಿಜೆಪಿಯೇತರ ಅನೇಕ ವಿರೋಧ ಪಕ್ಷಗಳಿಗೆ ಆಹ್ವಾನ ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com