ಕರ್ನಾಟಕದಲ್ಲಿ ಇಸ್ಲಾಮಿಕ್ ಸ್ಟೇಟ್ಸ್ ಸಂಚು ಪ್ರಕರಣ: ಮೊದಲ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ NIA

ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಇಸ್ಲಾಮಿಕ್ ಸ್ಟೇಟ್(ಐಎಸ್) ಸಂಚು ಪ್ರಕರಣದಲ್ಲಿ ಒಂಬತ್ತು ಮಂದಿ ವಿರುದ್ಧ ತನ್ನ ಮೊದಲ ಪೂರಕ ಚಾರ್ಜ್ ಶೀಟ್ ಅನ್ನು ಸಲ್ಲಿಸುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಇಂದು ಪ್ರಕಟಿಸಿದೆ.
ಎನ್ಐಎ
ಎನ್ಐಎ
Updated on

ನವದೆಹಲಿ: ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಇಸ್ಲಾಮಿಕ್ ಸ್ಟೇಟ್(ಐಎಸ್) ಸಂಚು ಪ್ರಕರಣದಲ್ಲಿ ಒಂಬತ್ತು ಮಂದಿ ವಿರುದ್ಧ ತನ್ನ ಮೊದಲ ಪೂರಕ ಚಾರ್ಜ್ ಶೀಟ್ ಅನ್ನು ಸಲ್ಲಿಸುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಇಂದು ಪ್ರಕಟಿಸಿದೆ.

ಮೊಹಮ್ಮದ್ ಶಾರಿಕ್, ಮಾಜ್ ಮುನೀರ್ ಅಹ್ಮದ್, ಸೈಯದ್ ಯಾಸಿನ್, ರೀಶಾನ್ ತಾಜುದ್ದೀನ್ ಶೇಖ್, ಹುಜೈರ್ ಫರ್ಹಾನ್ ಬೇಗ್, ಮಜಿನ್ ಅಬ್ದುಲ್ ರಹಮಾನ್, ನದೀಮ್ ಅಹ್ಮದ್ ಕೆ ಎ, ಜಬೀವುಲ್ಲಾ ಮತ್ತು ನದೀಮ್ ಫೈಜಲ್ ಎನ್ ವಿರುದ್ಧ ಯುಎ(ಪಿ) ಕಾಯ್ದೆ 1967, IPC ಮತ್ತು ಕರ್ನಾಟಕ ರಾಜ್ಯ ವಿನಾಶ ಮತ್ತು ಆಸ್ತಿ ನಷ್ಟ ತಡೆ ಕಾಯ್ದೆ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಎನ್ ಐಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳು ಶಿವಮೊಗ್ಗದಲ್ಲಿ ಐಇಡಿ ಸ್ಫೋಟ ನಡೆಸಿದ್ದಲ್ಲದೆ, ಹಲವು ಸ್ಥಳಗಳಲ್ಲಿ ವಿಚಕ್ಷಣಾ ಕಾರ್ಯಾಚರಣೆ ನಡೆಸಿ ಆಸ್ತಿಪಾಸ್ತಿ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿ ಜನರಲ್ಲಿ ಭಯ ಹುಟ್ಟಿಸಲು ಹಾಗೂ ಜನರಲ್ಲಿ ಭಯ ಹುಟ್ಟಿಸುವ ಸಂಚಿನ ಭಾಗವಾಗಿ ಭಾರತದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರದ ಘಟನೆಗಳನ್ನು ನಡೆಸಲು ಮತ್ತು ದೇಶದ ವಿರುದ್ಧ ದಾಳಿ ನಡೆಸಲು ಮುಂದಾಗಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಾಜ್ ಮುನೀರ್ ಅಹ್ಮದ್ ಮತ್ತು ಸೈಯದ್ ಯಾಸಿನ್ ವಿರುದ್ಧ ಮಾರ್ಚ್‌ನಲ್ಲಿಯೂ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಒಂಬತ್ತು ಮಂದಿಯಲ್ಲಿ, ಮಾಜ್ ಮುನೀರ್ ಅಹ್ಮದ್, ಸೈಯದ್ ಯಾಸಿನ್, ರೀಶಾನ್ ತಾಜುದ್ದೀನ್ ಶೇಖ್, ಮಜಿನ್ ಅಬ್ದುಲ್ ರಹಮಾನ್ ಮತ್ತು ನದೀಮ್ ಅಹ್ಮದ್ ಕೆಎ ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಅಧ್ಯಯನ ಮಾಡಿದ್ದಾರೆ.

ಭಾರತದಲ್ಲಿ ಉಗ್ರಗಾಮಿ ಗುಂಪಿನ ಕಾರ್ಯಸೂಚಿಯ ಭಾಗವಾಗಿ ಭವಿಷ್ಯದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸುವ ಕೌಶಲ್ಯಗಳನ್ನು ಪಡೆದುಕೊಳ್ಳಲು, ರೋಬೋಟಿಕ್ಸ್ ಕೋರ್ಸ್‌ಗಳನ್ನು ಮುಂದುವರಿಸಲು ಅವರ ವಿದೇಶಿ ಮೂಲದ ಐಎಸ್ ಹ್ಯಾಂಡ್ಲರ್‌ಗಳು ಅವರಿಗೆ ಜವಾಬ್ದಾರಿ ವಹಿಸಿದ್ದರು.

ಮೊಹಮ್ಮದ್ ಶಾರಿಕ್, ಮಾಜ್ ಮುನೀರ್ ಅಹ್ಮದ್ ಮತ್ತು ಸೈಯದ್ ಯಾಸಿನ್ ಅವರು ಭಯೋತ್ಪಾದಕ ಗುಂಪಿನ ನಿರ್ದೇಶನದ ಮೇರೆಗೆ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಉತ್ತೇಜಿಸಲು ವಿದೇಶದಲ್ಲಿರುವ ಐಎಸ್ ಕಾರ್ಯಕರ್ತರೊಂದಿಗೆ ಶಾಮೀಲಾಗಿ ಕ್ರಿಮಿನಲ್ ಸಂಚು ರೂಪಿಸಿದ್ದರು ಎಂದು ಎನ್ಐಎ ತನಿಖೆಗಳು ಬಹಿರಂಗಪಡಿಸಿವೆ.

ರಾಷ್ಟ್ರೀಯ ಭದ್ರತೆ ಮತ್ತು ದೇಶದ ಏಕತೆ ಮತ್ತು ಸಾರ್ವಭೌಮತೆಗೆ ಭಂಗ ತರುವ ಉದ್ದೇಶದಿಂದ ಮೂವರು ಸಕ್ರಿಯವಾಗಿ ಆಮೂಲಾಗ್ರವಾಗಿ ಮತ್ತು ಸಹ ಆರೋಪಿಗಳನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಎನ್ಐಎ ಅಧಿಕಾರಿ ತಿಳಿಸಿದ್ದಾರೆ.

ಎನ್‌ಐಎ ತನಿಖೆಯಲ್ಲಿ ಅವರ ಆನ್‌ಲೈನ್ ಹ್ಯಾಂಡ್ಲರ್ ಕ್ರಿಪ್ಟೋ ಕರೆನ್ಸಿಗಳ ಮೂಲಕ ಆರೋಪಿಗಳಿಗೆ ಹಣ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣವನ್ನು ಆರಂಭದಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸರು 2022ರ ಸೆಪ್ಟೆಂಬರ್ 19ರಂದು ದಾಖಲಿಸಿದ್ದರು. 2022ರ ನವೆಂಬರ್ 15ರಂದು ಎನ್ಐಎ ಪ್ರಕರಣವನ್ನು ಕೈಗೆತ್ತಿಕೊಂಡಿತು. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com