40 ಎನ್ ಸಿಪಿ ಶಾಸಕರಿಂದ ಮಹಾರಾಷ್ಟ್ರ ಸರ್ಕಾರಕ್ಕೆ ಬೆಂಬಲ: ಬಿಜೆಪಿ ಮುಖ್ಯಸ್ಥ
ಮಹಾರಾಷ್ಟ್ರದ ಎನ್ ಸಿಪಿ ಪಕ್ಷದ 40 ಶಾಸಕರು ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ ಎಂದು ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್ ಬವಾಂಕುಲೆ ಹೇಳಿದ್ದಾರೆ.
ಎನ್ ಸಿಪಿ ನಾಯಕ ಅಜಿತ್ ಪವಾರ್, ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿರುವ ಚಂದ್ರಶೇಖರ್ ಬವಾಂಕುಲೆ ಈ ಹೇಳಿಕೆ ನೀಡಿದ್ದಾರೆ.
ಅಜಿತ್ ಪವಾರ್ ಜೊತೆಗೆ ಶರದ್ ಪವಾರ್ ಬಣದ 8 ಶಾಸಕರು ಶಿವಸೇನಾ-ಬಿಜೆಪಿ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಪ್ರಮಾಣ ವಚನ ಸ್ವೀಕಾರದ ವೇಳೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ರಾಜಭವನದಲ್ಲಿ ಉಪಸ್ಥಿತರಿದ್ದರು. ಮಹಾರಾಷ್ಟ್ರದ ಮಾಜಿ ಗೃಹ ಸಚಿವರಾದ ದಿಲೀಪ್ ವಾಲ್ಸೆ ಪಾಟೀಲ್, ಹಸನ್ ಮುಶ್ರೀಫ್, ಸಂಜಯ್ ಬನ್ಸೋಡೆ, ಅದಿತಿ ತಟ್ಕರೆ, ಧರ್ಮರಾವ್ ಮತ್ತು ಧನಂಜಯ್ ಮುಂಡೆ ಕೂಡ ಮಹಾರಾಷ್ಟ್ರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇದಕ್ಕೂ ಮುನ್ನ ಅಜಿತ್ ಪವಾರ್ ಎನ್ ಸಿಪಿ ಶಾಸಕರ ಸಭೆ ಕರೆದಿದ್ದರು. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಈ ಸಭೆಯನ್ನು ಏಕೆ ಕರೆಯಲಾಗಿದೆ ಎಂದು ನನಗೆ ನಿಖರವಾಗಿ ತಿಳಿದಿಲ್ಲ, ಆದರೆ ವಿರೋಧ ಪಕ್ಷದ ನಾಯಕರಾಗಿರುವ ಅವರು (ಅಜಿತ್ ಪವಾರ್) ಶಾಸಕರ ಸಭೆ ಕರೆಯುವ ಹಕ್ಕು ಹೊಂದಿದ್ದಾರೆ ಎಂದು ಹೇಳಿದ್ದಾರೆ. ಅವರು ಇದನ್ನು ನಿಯಮಿತವಾಗಿ ಮಾಡುತ್ತಾರೆ. ಈ ಸಭೆಯ ಬಗ್ಗೆ ನನಗೆ ಹೆಚ್ಚು ತಿಳಿದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ