ವಿವಾಹಿತ ಪುರುಷರ ಆತ್ಮಹತ್ಯೆ: ರಾಷ್ಟ್ರೀಯ ಪುರುಷ ಆಯೋಗ ರಚನೆಗೆ ಮನವಿ ಮಾಡಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ವಿವಾಹಿತ ಪುರುಷರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪುರುಷರ ಆಯೋಗ ರಚನೆಗೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ವಿವಾಹಿತ ಪುರುಷರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪುರುಷರ ಆಯೋಗ ರಚನೆಗೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. 

ಪುರುಷರ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಪುರುಷರ ಆಯೋಗ ರಚನೆಗೆ ಮನವಿ ಮಾಡಲಾಗಿತ್ತು.  ನ್ಯಾ. ಸೂರ್ಯಕಾಂತ್ ಹಾಗೂ ದೀಪಂಕರ್ ದತ್ತ ಅವರಿದ್ದ ನ್ಯಾಯಪೀಠ, ಈ ಅರ್ಜಿಯನ್ನು ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿದೆ. 

ನೀವು ಏಕಪಕ್ಷೀಯ ಚಿತ್ರವನ್ನು ಮಾತ್ರ ಹೇಳುತ್ತಿದ್ದೀರಿ, ವಿವಾಹದ ಸ್ವಲ್ಪ ದಿನಗಳಲ್ಲೇ ಸಾವನ್ನಪ್ಪುತ್ತಿರುವ ಯುವತಿಯರ ಕುರಿತ ಡೇಟಾವನ್ನು ನೀಡಬಲ್ಲಿರಾ? ಎಂದು ನ್ಯಾಯಪೀಠ ಕೇಳಿದೆ.  ಯಾರಿಗೂ ಆತ್ಮಹತ್ಯೆ ಮಾಡಿಕೊಳ್ಳುವುದು ಬೇಕಿರುವುದಿಲ್ಲ. ಪ್ರತಿ ಪ್ರಕರಣದಲ್ಲೂ ವಾಸ್ತವಾಂಶಗಳು ಬೇರೆಯದ್ದೇ ಇರುತ್ತದೆ ಎಂದು ನ್ಯಾಯಪೀಠ ಹೇಳಿದೆ. 

2021 ರಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಭಾರತದಲ್ಲಿ ಆಕಸ್ಮಿಕ ಸಾವುಗಳ ಕುರಿತು ಪ್ರಕಟಿಸಿದ ಅಂಕಿ-ಅಂಶಗಳನ್ನು ಉಲ್ಲೇಖಿಸಿ ವಕೀಲ ಮಹೇಶ್ ಕುಮಾರ್ ತಿವಾರಿ ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ಆ ವರ್ಷದಲ್ಲಿ ದೇಶಾದ್ಯಂತ 1,64,033 ಜನರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ. ಅವರಲ್ಲಿ 81,063 ವಿವಾಹಿತ ಪುರುಷರು, 28,680 ವಿವಾಹಿತ ಮಹಿಳೆಯರು ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com