ಆಧ್ಯಾತ್ಮಿಕತೆ, ತಂತ್ರಜ್ಞಾನ ಮತ್ತು ಆರ್ಥಿಕತೆಯಲ್ಲಿ ಭಾರತ ಮುನ್ನಡೆಯುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ದೇಶದಲ್ಲಿ ಆಧ್ಯಾತ್ಮಿಕ ಕೇಂದ್ರಗಳು ಪುನಶ್ಚೇತನಗೊಳ್ಳುತ್ತಿರುವಂತೆಯೇ ತಂತ್ರಜ್ಞಾನ ಮತ್ತು ಆರ್ಥಿಕತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ

ಅಮರಾವತಿ: ದೇಶದಲ್ಲಿ ಆಧ್ಯಾತ್ಮಿಕ ಕೇಂದ್ರಗಳು ಪುನಶ್ಚೇತನಗೊಳ್ಳುತ್ತಿರುವಂತೆಯೇ ತಂತ್ರಜ್ಞಾನ ಮತ್ತು ಆರ್ಥಿಕತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಪ್ರಶಾಂತಿ ನಿಲಯದಲ್ಲಿ ಸಾಯಿ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ ಉದ್ಘಾಟನಾ ಸಮಾರಂಭದಲ್ಲಿ ವರ್ಚುಯಲ್ ಆಗಿ ಮಾತನಾಡಿದ ಅವರು, ಒಟ್ಟು ನೈಜ-ಸಮಯದ ಆನ್‌ಲೈನ್ ವಹಿವಾಟಿನ ಶೇ 40ರಷ್ಟು ಭಾರತದಲ್ಲಿ ನಡೆಯುತ್ತಿದೆ ಎಂದು ಹೇಳಿದರು.

'ಭಾರತವು ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟಪ್ ಪರಿಸರ ವ್ಯವಸ್ಥೆಯನ್ನು ಹೊಂದಿದೆ ಮತ್ತು ಡಿಜಿಟಲ್ ತಂತ್ರಜ್ಞಾನ ಮತ್ತು 5G ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ದೊಡ್ಡ ದೇಶಗಳೊಂದಿಗೆ ಸ್ಪರ್ಧಿಸುತ್ತಿದೆ. ಒಂದೆಡೆ ಆಧ್ಯಾತ್ಮಿಕ ಕೇಂದ್ರಗಳು ದೇಶದಲ್ಲಿ ಪುನರುಜ್ಜೀವನಗೊಳ್ಳುತ್ತಿವೆ. ಏಕಕಾಲದಲ್ಲಿ ಭಾರತವು ಆರ್ಥಿಕತೆ ಮತ್ತು ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿದೆ. ಇಂದು ಭಾರತವು ವಿಶ್ವದ ಅಗ್ರ ಐದು ಆರ್ಥಿಕತೆಗಳಲ್ಲಿ ಒಂದಾಗಿದೆ' ಎಂದು ಅವರು ಹೇಳಿದರು.

'ಸಾವಿರಾರು ವರ್ಷಗಳಿಂದ ಭಾರತೀಯ ಸಂತರು 'ಏಕ್ ಭಾರತ-ಶ್ರೇಷ್ಠ ಭಾರತದ ಚೈತನ್ಯವನ್ನು ಪೋಷಿಸಿದ್ದಾರೆ. ಪುಟ್ಟಪರ್ತಿಗೆ ಹಲವು ಬಾರಿ ಬಂದಿದ್ದೆ. ಆದರೆ, ಈ ಬಾರಿ ಬರಲು ಸಾಧ್ಯವಾಗಲಿಲ್ಲ. ಬಂದು ಆಶೀರ್ವಾದ ಮಾಡುವಂತೆ ಆಹ್ವಾನ ನೀಡಿದ್ದರು. ಆದರೆ, ಆಶೀರ್ವಾದ ಪಡೆಯಲು ಬರುತ್ತೇನೆ ನೀಡಲು ಅಲ್ಲ. ದೈಹಿಕವಾಗಿ ನಿಮ್ಮೊಂದಿಗೆ ಇಲ್ಲದಿದ್ದರೂ ತಂತ್ರಜ್ಞಾನದ ನೆರವಿನಿಂದ ‘ನಿಮ್ಮೆಲ್ಲರ ಜೊತೆ ನಾನಿದ್ದೇನೆ’ ಎಂದು ಮೋದಿ ಹೇಳಿದರು.

ಲೋಕೋಪಕಾರಿ ರ್ಯುಕೋ ಹಿರಾ ಅವರ ಅನುದಾನದಲ್ಲಿ ಶ್ರೀ ಸತ್ಯ ಸಾಯಿ ಸೆಂಟ್ರಲ್ ಟ್ರಸ್ಟ್ ಪುಟ್ಟಪರ್ತಿಯ ಪ್ರಶಾಂತಿ ನಿಲಯದಲ್ಲಿ ಸಾಯಿ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ ಅನ್ನು ನಿರ್ಮಿಸಿದೆ. ಈ ಹೊಸ ಸೌಲಭ್ಯವು ಸಮ್ಮೇಳನಗಳು, ಸೆಮಿನಾರ್‌ಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಇದರಲ್ಲಿ ಎಲ್ಲಾ ವರ್ಗಗಳ ವ್ಯಕ್ತಿಗಳ ನಡುವೆ ಸಂವಾದ ಮತ್ತು ತಿಳುವಳಿಕೆಯನ್ನು ಉತ್ತೇಜಿಸುತ್ತದೆ.

ಇದು ಧ್ಯಾನ ಮಂದಿರಗಳು, ಪ್ರಶಾಂತ ಉದ್ಯಾನಗಳು ಮತ್ತು ವಸತಿ ಸೌಲಭ್ಯಗಳನ್ನು ಹೊಂದಿದೆ. ಪ್ರಶಾಂತಿ ನಿಲಯಂ ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯಲ್ಲಿ ನೆಲೆಗೊಂಡಿರುವ ಸತ್ಯಸಾಯಿ ಬಾಬಾ ಅವರ ಮುಖ್ಯ ಆಶ್ರಮವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com