ಮಾನನಷ್ಟ ಮೊಕದ್ದಮೆ: ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್‌ಗೆ ಸಮನ್ಸ್ ಜಾರಿ

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ನ್ಯಾಯಾಲಯ ಸಮನ್ಸ್ ನೀಡಿದೆ.
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ನವದೆಹಲಿ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ನ್ಯಾಯಾಲಯ ಸಮನ್ಸ್ ನೀಡಿದೆ.

ಆಪಾದಿತ ಸಂಜೀವನಿ ಹಗರಣದ ಕುರಿತು ತಮ್ಮ ಹೇಳಿಕೆಗಳಿಂದ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಶೇಖಾವತ್ ಅವರು ದೂರು ಸಲ್ಲಿಸಿದ್ದರು. ಹೀಗಾಗಿ, ಆಗಸ್ಟ್ 7 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಗೆಹ್ಲೋಟ್ ಅವರಿಗೆ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಹರ್‌ಪ್ರೀತ್ ಸಿಂಗ್ ಸೂಚಿಸಿದ್ದಾರೆ.

ಸಂಜೀವಿನಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯಿಂದ ಸಾವಿರಾರು ಹೂಡಿಕೆದಾರರು ಸುಮಾರು 900 ಕೋಟಿ ರೂಪಾಯಿ ವಂಚಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣವಾಗಿದೆ.

ಆಪಾದಿತ ಹಗರಣದ ಬಗ್ಗೆ ಗೆಹ್ಲೋಟ್ ತಮ್ಮ ವಿರುದ್ಧ ಮಾನಹಾನಿಕರ ಟೀಕೆಗಳನ್ನು ಮಾಡುತ್ತಿದ್ದಾರೆ ಮತ್ತು ತಮ್ಮ ಇಮೇಜ್ ಅನ್ನು ಕಳಂಕಗೊಳಿಸಲು ಮತ್ತು ತಮ್ಮ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರಲು ಪ್ರಯತ್ನಿಸುತ್ತಿದ್ದಾರೆ ಎಂದು ಶೇಖಾವತ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com