ರಾಹುಲ್ ಗಾಂಧಿ ವಿರುದ್ಧ ತೀರ್ಪು: ರಾಜ್ಯಗಳಲ್ಲಿ ಕಾಂಗ್ರೆಸ್ ಕಚೇರಿಗಳ ಗಾಂಧಿ ಪ್ರತಿಮೆ ಮುಂದೆ ಜುಲೈ 12ರಂದು ಮೌನ ಪ್ರತಿಭಟನೆ

ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಾಗಿ ಶಿಕ್ಷೆಗೊಳಗಾಗಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಜುಲೈ 12 ರಂದು ಎಲ್ಲಾ ರಾಜ್ಯ ಪ್ರಧಾನ ಕಚೇರಿಗಳ ಮಹಾತ್ಮ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ "ಮೌನ ಸತ್ಯಾಗ್ರಹ" ನಡೆಸಲು ತೀರ್ಮಾನಿಸಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಾಗಿ ಶಿಕ್ಷೆಗೊಳಗಾಗಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಜುಲೈ 12 ರಂದು ಎಲ್ಲಾ ರಾಜ್ಯ ಪ್ರಧಾನ ಕಚೇರಿಗಳ ಮಹಾತ್ಮ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ "ಮೌನ ಸತ್ಯಾಗ್ರಹ" ನಡೆಸಲು ತೀರ್ಮಾನಿಸಿದೆ.

ರಾಹುಲ್ ಗಾಂಧಿಯವರು ತಮ್ಮ "ಮೋದಿ ಉಪನಾಮ" ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ರಾಹುಲ್ ಗಾಂಧಿಯವರ ಮನವಿಯನ್ನು ವಜಾಗೊಳಿಸಿದ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್, ಪ್ರತಿಭಟನೆಯ ಬಗ್ಗೆ ಪಕ್ಷದ ಎಲ್ಲಾ ರಾಜ್ಯ ಘಟಕಗಳ ಮುಖ್ಯಸ್ಥರು ಮತ್ತು ಪ್ರಮುಖ ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ.

"ರಾಹುಲ್ ಗಾಂಧಿ ಅವರು ವಿವಿಧ ವೇದಿಕೆಗಳಲ್ಲಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧವನ್ನು ಹೇಗೆ ನಿರಂತರವಾಗಿ ಪ್ರಶ್ನಿಸುತ್ತಿದ್ದಾರೆ ಮತ್ತು ಬಹಿರಂಗಪಡಿಸುತ್ತಿದ್ದಾರೆ ಎಂಬುದನ್ನು ಇಡೀ ಜಗತ್ತು ನೋಡಿದೆ. ಅವರ ಧೈರ್ಯದ ಅನ್ವೇಷಣೆಯು ಪ್ರಧಾನಿ ಮತ್ತು ಬಿಜೆಪಿ ಅವರನ್ನು ಹಲವು ಬಾರಿ ಮುಜುಗರಕ್ಕೆ ಈಡು ಮಾಡಿದೆ. ಇದರಿಂದ ಬಿಜೆಪಿ ಕುತಂತ್ರದಿಂದ ರಾಹುಲ್ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ ಎಂದು ವೇಣುಗೋಪಾಲ್ ಆರೋಪಿಸಿದ್ದಾರೆ. 

ಇಷ್ಟೆಲ್ಲಾ ಕಷ್ಟಗಳ ನಡುವೆಯೂ ಗಾಂಧಿಯವರು ಮೋದಿಯವರ ಅಧಿಕಾರ ದುರ್ಬಳಕೆಯ ವಿರುದ್ಧದ ಹೋರಾಟದಲ್ಲಿ ಮತ್ತು ಸತ್ಯಕ್ಕಾಗಿ ಹೋರಾಡುವಲ್ಲಿ ಮತ್ತು ದೇಶದ ಜನರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತುವಲ್ಲಿ ನಿರಂತರರಾಗಿದ್ದಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ, ನಮ್ಮ ನಾಯಕರ ಒಗ್ಗಟ್ಟಿನಿಂದ ಮತ್ತು ಅವರ ನಿರ್ಭೀತ ಮತ್ತು ರಾಜಿರಹಿತ ಹೋರಾಟವನ್ನು ಬೆಂಬಲಿಸಿ, ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಕಚೇರಿಗಳ ಮುಂದೆ ಒಂದು ದಿನದ ಮೌನ ಪ್ರತಿಭಟನೆ ನಡೆಸಲಾಗುವುದು. ಜುಲೈ 12, 2023 ರಂದು ಬುಧವಾರ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಎಲ್ಲಾ ರಾಜ್ಯ ಪ್ರಧಾನ ಕಛೇರಿಗಳಲ್ಲಿ ಎಲ್ಲಾ ಹಿರಿಯ ನಾಯಕರು, ಸಂಸದರು, ಶಾಸಕರು, ಎಂಎಲ್‌ಸಿಗಳು, ಇತರ ಚುನಾಯಿತ ಪ್ರತಿನಿಧಿಗಳು ಮತ್ತು ಬೆಂಬಲಿಗರು ಭಾಗವಹಿಸಲಿದ್ದಾರೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com