ಮಧ್ಯ ಪ್ರದೇಶ: ದಲಿತ ಯುವಕರಿಗೆ ಬಲವಂತವಾಗಿ ಮಲ ತಿನ್ನಿಸಿ ಹೀನ ಕೃತ್ಯ; 7 ಮಂದಿ ಬಂಧನ, ಆರೋಪಿಗಳ ಮನೆ ನೆಲಸಮ

ಕೆಳ ಜಾತಿಯ ಇಬ್ಬರು ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಘಟನೆ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿರುವುದಾಗಿ ಶುಕ್ರವಾರ (ಜುಲೈ 7) ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭೂಪಾಲ್: ಕೆಳ ಜಾತಿಯ ಇಬ್ಬರು ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಘಟನೆ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿರುವುದಾಗಿ ಶುಕ್ರವಾರ (ಜುಲೈ 7) ವರದಿಯಾಗಿದೆ.

ಕಳೆದ ಜೂನ್ 30 ರಂದು ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ. 23 ಮತ್ತು 24 ವರ್ಷದ ಇಬ್ಬರು ಯುವಕರ ಮೇಲೆ ಈ ಅಮಾನವೀಯ ಕೃತ್ಯ ಎಸಗಲಾಗಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ಮಧ್ಯ ಪ್ರದೇ‍ಶ ಸ್ಥಳೀಯ ಪೊಲೀಸರ ತನಿಖೆಯ ನಂತರ ಯುವಕರ ಮೇಲಿರುವ ಲೈಂಗಿಕ ದೌರ್ಜನ್ಯದ ಆರೋಪಗಳು ಆಧಾರ ರಹಿತವೆಂದು ದೃಢಪಡಿಸಿವೆ. ಆಸ್ತಿ ಸಂಬಂಧಿತ ವಿವಾದಕ್ಕೆ ಆರೋಪಿಗಳು ಹೀಗೆ ಮಾಡಿದ್ದಾರೆ ಎಂಬುದು ತಿಳಿದು ಬಂದಿದೆ. ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಘಟನೆಯನ್ನು ಖಂಡಿಸಿದ್ದಾರೆ.

ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ) ಅಡಿ ಪ್ರಕರಣ ದಾಖಲಿಸಲು ಮತ್ತು ಅವರು ಅಕ್ರಮವಾಗಿ ನಿರ್ಮಿಸಿದ ಆಸ್ತಿಗಳನ್ನು ಕೆಡವಲು ಶಿವಪುರಿ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಲಾಗಿದೆ” ಎಂದು ಅವರು ಹೇಳಿದರು. ಮಧ್ಯಪ್ರದೇಶ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಬೆನ್ನಲ್ಲೇ ಮಲ ತಿನ್ನಿಸಿದ ಘಟನೆ ವರದಿಯಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಾದ ಅಜ್ಮತ್ ಖಾನ್, ವಕೀಲ್ ಖಾನ್, ಆರಿಫ್ ಖಾನ್, ಶಾಹಿದ್ ಖಾನ್, ಇಸ್ಲಾಂ ಖಾನ್, ರಹೀಶಾ ಬಾನೋ ಮತ್ತು ಸೈನಾ ಬಾನೊ ಎಂಬ ಕಿರಾತಕರನ್ನು ಗುರುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಜೈಲಿಗೆ ಕಳುಹಿಸಿದ್ದಾರೆ. ಇನ್ನೊಂದೆಡೆ ಅರಣ್ಯ, ಪೊಲೀಸ್ ಮತ್ತು ಜಿಲ್ಲಾಡಳಿತದ ಜಂಟಿ ತಂಡವು ಅರಣ್ಯ ಭೂಮಿಯಲ್ಲಿ ಮನೆ ನಿರ್ಮಿಸಲಾಗಿದೆ ಎಂಬ ಕಾರಣಕ್ಕಾಗಿ ಆರೋಪಿಗಳ ಕುಟುಂಬದ ಮೂರು ಮನೆಗಳನ್ನು ಭಾಗಶಃ ನೆಲಸಮಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com